ಚಂಡೀಗಢ: ಮುಲ್ಲಾನ್ಪುರದ ಮಹಾರಾಜ ಯದವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ನಿನ್ನೆ ( ಮೇ 29 ) ನಡೆದ 18ನೇ ಐಪಿಎಲ್ ಆವೃತ್ತಿಯ ಒಂದನೇ ಕ್ವಾಲಿಫಯರ್ 1 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂಜಾಬ್ ಕಿಂಗ್ಸ್ ವಿರುದ್ಧ 8 ವಿಕೆಟ್ಗಳ ಗೆಲುವನ್ನು ದಾಖಲಿಸುವ ಮೂಲಕ ಫೈನಲ್ ಪ್ರವೇಶಿಸಿದೆ.
ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ಆರ್ಸಿಬಿ ಬೌಲಿಂಗ್ ದಾಳಿಗೆ ಮಕಾಡೆ ಮಲಗಿ 14.1 ಓವರ್ಗಳಲ್ಲಿ 101 ರನ್ಗೆ ಆಲ್ಔಟ್ ಆಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 102 ರನ್ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 10 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ 106 ರನ್ ಕಲೆಹಾಕಿದೆ.
ಹೀಗೆ ಪಂಜಾಬ್ ಕಿಂಗ್ಸ್ ವಿರುದ್ಧದ ಮಹತ್ವದ ಕ್ವಾಲಿಫಯರ್ 1 ಪಂದ್ಯವನ್ನು ಗೆದ್ದಿರುವ ಆರ್ಸಿಬಿ ತನ್ನ ಗೆಲುವನ್ನು ಅಭಿಮಾನಿಗಳಿಗೆ ಅರ್ಪಿಸಿದ್ದಾರೆ. ವಿರಾಟ್ ಕೊಹ್ಲಿ ಅಭಿಮಾನಿಗಳತ್ತ ಚಪ್ಪಾಳೆ ತಟ್ಟುತ್ತಿರುವ ಫೋಟೊವನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಆರ್ಸಿಬಿ ʼಇದು ಅಭಿಮಾನಿ ದೇವ್ರುಗಳಿಗೆʼ ಎಂದು ಬರೆದುಕೊಳ್ಳುವ ಮೂಲಕ ಪಂದ್ಯದ ಗೆಲುವನ್ನು ಅಭಿಮಾನಿಗಳಿಗೆ ಅರ್ಪಿಸಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


