ಚಂಡೀಗಢ: ನಿನ್ನೆ ( ಮೇ 29 ) ಮುಲ್ಲಾನ್‌ಪುರದ ಮಹಾರಾಜ ಯದವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ನಡೆದ 18ನೇ ಐಪಿಎಲ್ ಆವೃತ್ತಿಯ ಒಂದನೇ ಕ್ವಾಲಿಫಯರ್ 1 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂಜಾಬ್ ಕಿಂಗ್ಸ್ ವಿರುದ್ಧ 8 ವಿಕೆಟ್‌ಗಳ ಗೆಲುವನ್ನು ದಾಖಲಿಸುವ ಮೂಲಕ ಫೈನಲ್ ಪ್ರವೇಶಿಸಿತು.
ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ಆರ್‌ಸಿಬಿ ಬೌಲಿಂಗ್ ದಾಳಿಗೆ ಮಕಾಡೆ ಮಲಗಿ 14.1 ಓವರ್‌ಗಳಲ್ಲಿ 101 ರನ್‌ಗೆ ಆಲ್‌ಔಟ್ ಆಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 102 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 10 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 106 ರನ್ ಕಲೆಹಾಕಿತು.
ಈ ಗೆಲುವಿನ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫೈನಲ್‌ಗೆ ಲಗ್ಗೆ ಇಟ್ಟಿದೆ. ಅತ್ತ ವಿರಾಟ್ ಕೊಹ್ಲಿ ಪಂದ್ಯದ ವೇಳೆ ನಡೆದುಕೊಂಡ ರೀತಿಗೆ ಭಾರೀ ಟೀಕೆ ವ್ಯಕ್ತವಾಗಿದೆ. ಪಂಜಾಬ್ ಕಿಂಗ್ಸ್ ತಂಡ ಮುಶೀರ್ ಖಾನ್ ಎಂಬ ಆಟಗಾರ ನಿನ್ನೆ ಮೈದಾನಕ್ಕೆ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದಾಗ ಸ್ಲಿಪ್‌ನಲ್ಲಿ ನಿಂತಿದ್ದ ಕೊಹ್ಲಿ ಕೈಸನ್ನೆ ಮಾಡುವ ಮೂಲಕ ವಾಟರ್ ಬಾಯ್ ಎಂದಿದ್ದಾರೆ.
ಕೊಹ್ಲಿ ನಡೆಗೆ ಭಾರೀ ಟೀಕೆಗಳು ವ್ಯಕ್ತವಾಗಿದ್ದು, ಓರ್ವ ಅನುಭವಿ ಹಿರಿಯ ಕ್ರಿಕೆಟಿಗನಾಗಿ ವಿರಾಟ್ ಯುವ ಆಟಗಾರರ ಜೊತೆ ತುಸು ಮರ್ಯಾದೆಯಿಂದ ವರ್ತಿಸಬೇಕಿದೆ ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ.
ಇನ್ನು ಮುಶೀರ್ ಖಾನ್ 3 ಎಸೆತಗಳನ್ನು ಎದುರಿಸಿ ಯಾವುದೇ ರನ್ ಗಳಿಸದೇ ಸುಯಶ್ ಶರ್ಮಾಗೆ ಎಲ್‌ಬಿಡಬ್ಲ್ಯೂ ಆಗುವ ಮೂಲಕ ಡಕ್‌ಔಟ್ ಆಗಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


