Tuesday, August 4, 2026
spot_img
More
    spot_img
    HomeLatest newsಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ: ಎಲ್ಲೆಡೆ ಹದ್ದಿನ ಕಣ್ಣಿಟ್ಟ ಸಿಆರ್‌ಪಿಎಫ್‌

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ: ಎಲ್ಲೆಡೆ ಹದ್ದಿನ ಕಣ್ಣಿಟ್ಟ ಸಿಆರ್‌ಪಿಎಫ್‌

    ಶ್ರೀನಗರ: ಜುಲೈ 3ರಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಆರಂಭವಾಗಲಿರುವ ಅಮರನಾಥ ಯಾತ್ರೆಗೆ ಮುಂಚಿತವಾಗಿ, ಯಾತ್ರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸಿಆರ್‌ಪಿಎಫ್‌ (ಕೇಂದ್ರ ಮೀಸಲು ಪೊಲೀಸ್ ಪಡೆ) ಎನ್‍ಹೆಚ್-44ರಲ್ಲಿ ಕಣ್ಗಾವಲು ಹೆಚ್ಚಿಸಿದೆ.

    Advertisement

    ಜಮ್ಮು-ಶ್ರೀನಗರ ಹೆದ್ದಾರಿ ಸಾವಿರಾರು ಯಾತ್ರಿಕರಿಗೆ ಪ್ರಮುಖ ಮಾರ್ಗಗಳಲ್ಲಿ ಒಂದಾಗಿದೆ. ಸಿಆರ್‌ಪಿಎಫ್‌ ಅದರ ಮೇಲೆ ಕಣ್ಗಾವಲು ಹೆಚ್ಚಿಸಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆ-9 ಶ್ವಾನ ದಳಗಳನ್ನು ಅದರ ಸಿಬ್ಬಂದಿಯೊಂದಿಗೆ ನಿಯೋಜಿಸಲಾಗಿದೆ.

    ಉಧಮ್‍ಪುರ ವಲಯದಂತಹ ಸೂಕ್ಷ್ಮ ಪ್ರದೇಶಗಳ ಮೇಲೆ ವಿಶೇಷ ಗಮನಹರಿಸಿ ಹೆದ್ದಾರಿ ಗಸ್ತು ತಿರುಗುವಿಕೆಯನ್ನು ನಡೆಸಲಾಗುತ್ತಿದೆ. ಜುಲೈ.2ರಂದು ಶಿಬಿರದಿಂದ ಯಾತ್ರಾರ್ಥಿಗಳ ಮೊದಲ ಬ್ಯಾಚ್‍ಗೆ ಹಸಿರು ನಿಶಾನೆ ತೋರಲಾಗುವುದು, ಆದರೆ ಜುಲೈ.3ರಂದು ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಯಾತ್ರೆ ಅಧಿಕೃತವಾಗಿ ಪ್ರಾರಂಭವಾಗಲಿದೆ.

    ಜುಲೈ.2ರಿಂದ ಭಗವತಿ ನಗರದಿಂದ ಯಾತ್ರೆ ಆರಂಭವಾಗಲಿದೆ ಎಂದು ಆಯುಕ್ತ ರಮೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಸಭೆ ನಡೆಸಿ ಪೊಲೀಸರು, ಧಾರ್ಮಿಕ ಸಂಸ್ಥೆಗಳು, ಟ್ಯಾಕ್ಸಿ ಒಕ್ಕೂಟಗಳು, ವ್ಯಾಪಾರಿಗಳು, ಮಾರುಕಟ್ಟೆ ಮತ್ತು ಹೋಟೆಲ್ ಸಂಘದ ಅಧಿಕಾರಿಗಳಿಂದ ಸಲಹೆಗಳನ್ನು ಪಡೆಯಲಾಯಿತು. ಅಮರನಾಥ ಯಾತ್ರಿಕರಿಗೆ ವಸತಿ ಮತ್ತು ಆಹಾರದಲ್ಲಿ ಯಾವುದೇ ಸಮಸ್ಯೆ ಎದುರಾಗದಂತೆ ಸಾಕಷ್ಟು ಕುಡಿಯುವ ನೀರು ಮತ್ತು ವಿದ್ಯುತ್ ಪೂರೈಕೆಯನ್ನು ಖಚಿತಪಡಿಸಲಾಗಿದೆ ಎಂದು ಆಯುಕ್ತರು ಹೇಳಿದರು.

    ಬೇಸ್ ಕ್ಯಾಂಪ್‍ನಲ್ಲಿಯಾತ್ರಿಕರಿಗೆ ಎಸಿ ಹಾಲ್, ಹ್ಯಾಂಗರ್, ಸಮುದಾಯ ಲಂಗಾರ್ ಸೇವೆ, ಸ್ವಚ್ಛ ಮೊಬೈಲ್ ಶೌಚಾಲಯಗಳನ್ನು ಒದಗಿಸಲಾಗಿದೆ. ಇದರೊಂದಿಗೆ, ಕಥುವಾದ ಲಖನ್‍ಪುರದಿಂದ ಲಂಬಾರ್ ಮತ್ತು ರಾಂಬನ್‍ನ ಬನಿಹಾಲ್‍ಗೆ ಯಾತ್ರೆಯ ಮಾರ್ಗದಲ್ಲಿರುವ ಜಿಲ್ಲೆಗಳ ವಸತಿ ಕೇಂದ್ರಗಳಲ್ಲಿ ಯಾತ್ರಿಕರಿಗೆ ಇದೇ ರೀತಿಯ ಸೌಲಭ್ಯಗಳು ಸಿಗುತ್ತವೆ.

    ಜುಲೈ 1 ರಿಂದ ಆಫ್‍ಲೈನ್ ನೋಂದಣಿ ಆರಂಭವಾಗಲಿದೆ ಎಂದು ಆಯುಕ್ತರು ತಿಳಿಸಿದ್ದಾರೆ. ಆನ್‍ಲೈನ್ ನಂತರ ಜುಲೈ 1 ರಿಂದ ಯಾತ್ರಿಕರಿಗೆ ಆಫ್‍ಲೈನ್ ನೋಂದಣಿ ಸೌಲಭ್ಯವನ್ನು ಒದಗಿಸಲಾಗುತ್ತದೆದೆ. ಯಾತ್ರಿಕರು ಒಂದು ದಿನ ಮೊದಲು ಭಗವತಿ ನಗರ ಯಾತ್ರಾ ಮೂಲ ಶಿಬಿರವನ್ನು ತಲುಪುತ್ತಾರೆ, ಮರುದಿನ ಬಾಲ್ಟಾಲ್, ಪಹಲ್ಗಾಮ್ ಮೂಲಶಿಬಿರಕ್ಕೆ ಹೊರಡುತ್ತಾರೆ ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ.

    ಸ್ಥಗಿತಗೊಂಡಿದ್ದ ಚಾರ್‌ ಧಾಮ್‌ ಯಾತ್ರೆ ಪುನರಾರಂಭ

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading