ಡೆಹ್ರಾಡೂನ್: ಉತ್ತರಾಖಂಡದಾದ್ಯಂತ ವರುಣಾರ್ಭಟ ಕೊಂಚ ಕಡಿಮೆಯಾಗಿದ್ದು, ಉತ್ತರ ಕಾಶಿಯಲ್ಲಿ ಗಂಗೋತ್ರಿ-ಯಮುನೋತ್ರಿ ದೇವಾಲಯಗಳು ತೆರೆದಿವೆ. ಈ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಚಾರ್ ಧಾಮ್ ಯಾತ್ರೆ ಪುನರಾರಂಭವಾಗಿದೆ.
ಭಾರೀ ಮಳೆ, ಮೇಘಸ್ಫೋಟದ ಹಿನ್ನೆಲೆಯಲ್ಲಿ ಯಾತ್ರೆಯನ್ನು ಒಂದು ದಿನದ ಮಟ್ಟಿಗೆ ಸ್ಥಗಿತಗೊಳಿಸಲಾಗಿತ್ತು. ಇಂದು ಮಳೆಯ ಅಬ್ಬರ ಕೊಂಚ ಕಡಿಮೆಯಾದ ಹಿನ್ನೆಲೆಯಲ್ಲಿ ಚಾರ್ ಧಾಮ್ ಯಾತ್ರೆ ಮತ್ತೆ ಆರಂಭವಾಗಿದೆ.
ಈ ಯಾತ್ರೆಗೆ ಸಾಗುವ ಮಾರ್ಗಗಳಲ್ಲಿ ಅಲ್ಲಲ್ಲಿ ಹವಾಮಾನ ಪರಿಸ್ಥಿತಿಯನ್ನು ಆಧರಿಸಿ ವಾಹನಗಳನ್ನು ತಡೆಯುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ರಾಜ್ಯದಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿತ್ತು ಈ ಹಿನ್ನೆಲೆಯಲ್ಲಿ ಹರಿದ್ವಾರ, ಖುಷಿಕೇಶ, ರುದ್ರಪ್ರಯಾಗ, ಶ್ರೀನಗರ, ಸೋನ್ ಪ್ರಯಾಗ್ ಹಾಗೂ ವಿಕಾಸನಗರದಲ್ಲಿ ಯಾತ್ರಿಕರನ್ನು ತಡೆದು ಸುರಕ್ಷಿತ ಸ್ಥಳಗಳಿಗೆ ತೆರಳಲು ವ್ಯವಸ್ಥೆ ಮಾಡಲಾಗಿತ್ತು. ಇಂದು ಮಳೆ ಕಡಿಮೆಯಾಗಿರುವುದರಿಂದ ಯಾತ್ರೆ ಮುಂದುವರಿದಿದೆ.
ಮ್ಯಾಕ್ಸ್ ನಿರ್ದೇಶಕನ ಜತೆ ಮತ್ತೆ ಸುದೀಪ್ ಸಿನಿಮಾ; ʼಮ್ಯಾಕ್ಸ್ 2ʼ ಇದೇನಾ?
ಎಐ ಕೃಷಿ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


