ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಕುರಿತಾಗಿ ಹೈಕಮಾಂಡ್ ಸೂಕ್ತ ಸಂದರ್ಭದಲ್ಲಿ ಸರಿಯಾದ ತೀರ್ಮಾನ ತೆಗೆದುಕೊಳ್ಳುತ್ತದೆ. ಹೀಗಾಗಿ ವರಿಷ್ಠರ ನಿರ್ಧಾರವೇ ಅಂತಿಮ ಎಂದು ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಹೊಸ ಟ್ವಿಸ್ಟ್ ಕೊಟ್ಟಿದ್ದಾರೆ.
ಈ ಮೂಲಕ ಏನೇ ನಿರ್ಧಾರ ಮಾಡುವುದಾದರೂ ಹೈಕಮಾಂಡ್ ತೀರ್ಮಾನ ಮಾಡೇ ಮಾಡುತ್ತದೆ ಎಂಬ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವ ಬದಲಾವಣೆ ಆಗಲಿದೆ ಎಂಬ ಊಹಾಪೋಹಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾವಾಗ ಯಾರ ನಾಯಕತ್ವ ಬದಲಾಯಿಸಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ.ಕೆಲವು ಸಂದರ್ಭಗಳಲ್ಲಿ ವರಿಷ್ಟರ ನಿರ್ಧಾರ ಏನಿರುತ್ತದೆ ಎಂಬುದನ್ನು ಯಾರು ಕೂಡ ಉಹೆ ಮಾಡಲು ಸಾಧ್ಯವಿಲ್ಲ ಎನ್ನುವ ಮೂಲಕ ಮತ್ತಷ್ಟು ಕುತೂಹಲ ಕೆರಳಿಸಿದರು.
ಸಿಎಂ ಸಿದ್ದರಾಮಯ್ಯ ಬದಲಾವಣೆ ಮಾಡುವುದು ಹೈಕಮಾಂಡ್ ಕೈಯ್ಯಲ್ಲಿದೆ. ಅದು ಹೈಕಮಾಂಡ್ಗೆ ಬಿಟ್ಟ ವಿಚಾರ. ಹೈಕಮಾಂಡ್ ಮಟ್ಟದಲ್ಲಿ ಏನು ನಡೆಯುತ್ತಿದೆ ಎಂದು ಯಾರೂ ಹೇಳಲು ಆಗುವುದಿಲ್ಲ. ಈ ಕುರಿತಾಗಿ ಯಾರೂ ಅನಗತ್ಯ ಗೊಂದಲ ಉಂಟುಮಾಡಬಾರದು ಎಂದು ಪರೋಕ್ಷವಾಗಿ ಎಚ್ಚರಿಕೆ ಕೊಟ್ಟರು.
ಶಾಸಕರ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸಿ, ಅದರ ಬಗ್ಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ. ಸುರ್ಜೇವಾಲ ರಾಜ್ಯಕ್ಕೆ ಬಂದಿದ್ದಾರೆ. ಅವರು ಏನೇನು ನಡೆದಿದೆ ಎಂದು ಕೇಳುತ್ತಾರೆ ಎಂದರು.
ಉಗ್ರ ಹೋರಾಟ
ಸಂವಿಧಾನದ ಪ್ರಸ್ತಾವನೆಯಲ್ಲಿ ಇರುವ ಜಾತ್ಯತೀತ ಹಾಗೂ ಸಮಾಜವಾದ ಪದಗಳನ್ನು ತೆಗೆದುಹಾಕಬೇಕು ಎಂಬ ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಹೇಳಿಕೆಗೆ, ಅವರು ಮ್ಯಾನ್ ಆಫ್ ಮನುಸ್ಮೃತಿ. ಸಮಾಜವಾದ ಮತ್ತು ಜಾತ್ಯತೀತತೆಯನ್ನು ಇಷ್ಟಪಡುವುದಿಲ್ಲ. ಅವರು ಯಾವತ್ತೂ ಬಡವರ ವಿರುದ್ಧ. ಅವರಿಗೆ ಅಷ್ಟು ಆಸಕ್ತಿ ಇದ್ದರೆ ಅಸಮಾನತೆಯನ್ನು ತೊಡೆದು ಹಾಕಬೇಕಿತ್ತು. ಸಂವಿಧಾನದಲ್ಲಿ ಏನಾದರೂ ಬದಲಾವಣೆ ಮಾಡಿದರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಆರ್‌ಎಸ್‌ಎಸ್ ನಾಯಕ ದತ್ತಾತ್ರೇಯ ಹೊಸಬಾಳೆ ಮನುಸ್ಮೃತಿ ವ್ಯಕ್ತಿ . ಬಡವರ್ಗದ ಜನರು ಏಳಿಗೆ ಹೊಂದುವುದು ಅವರಿಗೆ ಇಷ್ಟವಿಲ್ಲ. ಸಾವಿರ ವರ್ಷಗಳಿಗೂ ಹೆಚ್ಚು ಕಾಲ ಪಾಲಿಸಿಕೊಂಡು ಬಂದಿರುವುದನ್ನು ಅವರು ಇನ್ನೂ ಮುಂದುವರಿಸುತ್ತಿದ್ದಾರೆ. ಅದಕ್ಕಾಗಿಯೇ ಅವರು ಸಮಾಜವಾದ, ಜಾತ್ಯತೀತತೆ, ಒಕ್ಕೂಟ ವ್ಯವಸ್ಥೆ, ಸ್ವಾತಂತ್ರ‍್ಯ, ಸಮಾನತೆ ಅಥವಾ ಭ್ರಾತೃತ್ವದಲ್ಲಿ ನಂಬಿಕೆ ಇಡುವುದಿಲ್ಲ. ಎಲ್ಲಾ ಮೌಲ್ಯಗಳನ್ನು ತಿರಸ್ಕರಿಸುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ಇದು ಅವರ ಪಕ್ಷದ ಮಾರ್ಗ, ಆರ್‌ಎಸ್‌ಎಸ್ ಮಾರ್ಗಕ್ಕೆ ನಿಜವಾಗಿಯೂ ಬದ್ಧರಾಗಿದ್ದರೆ, ಅವರು ಅಸ್ಪೃಶ್ಯತೆಯನ್ನು ತೊಡೆದು ಹಾಕುತ್ತಿದ್ದರು ಎಂದು ಟಾಂಗ್ ಕೊಟ್ಟರು.
DK Shivakumar: ಡಿಕೆ ಮುಖ್ಯಮಂತ್ರಿಯಾದ್ರೂ ಆಗಲಿ, ಪ್ರಧಾನಮಂತ್ರಿಯಾಗಲಿ ಯಾರು ಬೇಡ ಅಂತಾರೆ?: ಕೆಎನ್ ರಾಜಣ್ಣ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


