ಬೆಂಗಳೂರು: ನಟ ದರ್ಶನ್ ಅವರ ಅಭಿಮಾನಿಗಳು ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ನಟ ಪ್ರಥಮ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎ ಸಿ.ಕೆ.ಬಾಬಾ ಅವರಿಗೆ ಮಂಗಳವಾರ ಲಿಖಿತ ದೂರು ನೀಡಿದ್ದು, ಎಫ್‌ಐಆರ್ ದಾಖಲಾಗಿದೆ.
ದೂರು ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದ ಪ್ರಥಮ್, ‘ನನಗೆ ದರ್ಶನ್ ಅಭಿಮಾನಿಗಳು ಬೆದರಿಕೆ ಹಾಕುತ್ತಿದ್ದಾರೆ. ನನಗೆ ಏನಾದರೂ ಆದರೆ ದರ್ಶನ್ ಅವರೇ ಕಾರಣ. ದರ್ಶನ್ ಅವರಿಗೆ ಸಾಮಾನ್ಯ ಜ್ಞಾನ ಇಲ್ವಾ? ಅವರು ತಮ್ಮ ಅಭಿಮಾನಿಗಳಿಗೆ ಬುದ್ಧಿ ಹೇಳಬೇಕು’ ಎಂದು ಕೋರಿದರು. ಸಾಕಷ್ಟು ಬಾರಿ ಬೆದರಿಕೆ ಬಂದಿದೆ. ಸದ್ಯಕ್ಕೆ ಬೆಂಗಳೂರು ಬಿಟ್ಟು ಸ್ವಂತ ಊರಾದ ಚಾಮರಾಜನಗರಕ್ಕೆ ತೆರಳುತ್ತಿದ್ದೇನೆ ಎಂದು ಹೇಳಿದರು.
ಪ್ರಥಮ್ ಜುಲೈ 22ರಂದು ದೊಡ್ಡಬಳ್ಳಾಪುರದ ದೇವಾಲಯವೊಂದಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಅಲ್ಲಿದ್ದ ಕೆಲ ದರ್ಶನ್ ಅಭಿಮಾನಿಗಳು ಮಾರಕಾಸ್ತ್ರ ಹೊರತೆಗೆದು ನಮ್ಮ ಬಾಸ್ ಬಗ್ಗೆ ಮಾತನಾಡಿದ್ರೆ ಚುಚ್ಚಿಬಿಡುತ್ತೇವೆ ಎಂದು ಬೆದರಿಕೆ ಹಾಕಿದ್ದರು.
ಚಾಮರಾಜನಗರ ಉದ್ಯೋಗಾಂಕ್ಷಿಗಳಿಗೆ ಗುಡ್‌ನ್ಯೂಸ್: ಇಂದು ಉದ್ಯೋಗಕ್ಕಾಗಿ ನೇರ ಸಂದರ್ಶನ
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


