ಜಮ್ಮು-ಕಾಶ್ಮೀರ: ಭಾರತೀಯ ಸೇನೆಯು ಆಪರೇಷನ್ ಶಿವಶಕ್ತಿ ಕಾರ್ಯಾಚರಣೆ ಕೈಗೊಂಡಿದ್ದು, ಜಮ್ಮು-ಕಾಶ್ಮೀರದ ಗಡಿಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.
ಕಾಶ್ಮೀರದ ಪೂಂಚ್ ಸೆಕ್ಟರ್ ಬಳಿ ಗಡಿ ನಿಯಂತ್ರಣ ರೇಖೆ ಬಳಿ ದೇಶದ ಒಳನುಗ್ಗಲು ಯತ್ನಿಸುತ್ತಿದ್ದ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಎನ್ಕೌಂಟರ್ನಲ್ಲಿ ಹೊಡೆದುರುಳಿಸಿದೆ.
ಇನ್ನು ನುಸುಳುಕೋರರನ್ನು ತಡೆಯುವ ನಿಟ್ಟಿನಲ್ಲಿ ಭಾರತೀಯ ಸೇನೆ ಗಡಿಯುದ್ದಕ್ಕೂ ಆಪರೇಷನ್ ಶಿವಶಕ್ತಿ ಕಾರ್ಯಾಚರಣೆಯನ್ನು ಕೈಗೊಂಡಿದ್ದು, ಸೇನೆಯ 16 ಕಾರ್ಪ್ಸ್ ತುಕಡಿ ಈ ಕಾರ್ಯಾಚರಣೆ ನಡೆಸಿದೆ.
ಎನ್ಕೌಂಟರ್ನಲ್ಲಿ ಬಲಿಯಾದ ಉಗ್ರರ ಬಳಿ ಮೂರು ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಭಾರತೀಯ ಸೇನೆ ತಿಳಿಸಿದೆ.
ಇನ್ನು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿ ಬಳಿಕ ಭಾರತೀಯ ಸೇನೆ ಹಾಗೂ ಜಮ್ಮು-ಕಾಶ್ಮೀರ ಪೊಲೀಸರು ಎಲ್ಲೆಡೆ ಹದ್ದಿನ ಕಣ್ಣಿಟ್ಟಿದ್ದು, ಮೂಲೆ ಮೂಲೆಯನ್ನು ಬಿಡದೇ ಹುಡುಕಾಟ ನಡೆಸುತ್ತಿದೆ. ಕಳೆದ ಮೂರು ದಿನಗಳ ಹಿಂದೆಯಷ್ಟೇ ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಉಗ್ರರನ್ನು ಭಾರತೀಯ ಸೇನೆ ಎನ್ಕೌಂಟರ್ ಮಾಡಿದೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್: ಆಗಸ್ಟ್ 1ಕ್ಕೆ ತೀರ್ಪು ಮುಂದೂಡಿಕೆ
ಎಐ ಕನ್ನಡ ಕೃಷಿ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


