ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಕೇಸ್‌ಗೆ ಸಂಬಂಧಿಸಿದಂತೆ ಆಗಸ್ಟ್.1ಕ್ಕೆ ತೀರ್ಪು ಮುಂದೂಡಿಕೆಯಾಗಿದೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕೆ.ಆರ್.ನಗರ ಮೂಲದ ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಲಿಲ್ಲ.
ಪ್ರಜ್ವಲ್ ರೇವಣ್ಣರನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಎರಡೂ ಕಡೆ ವಕೀಲರಿಂದ ಸ್ಪಷ್ಟನೆ ಕೇಳಿದ ಕೋರ್ಟ್ ಆಗಸ್ಟ್.1ಕ್ಕೆ ತೀರ್ಪು ಮುಂದೂಡಿಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್.1ಕ್ಕೆ ಪ್ರಜ್ವಲ್ ರೇವಣ್ಣ ಭವಿಷ್ಯ ನಿರ್ಧಾರವಾಗಲಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ.18ರಂದು ವಾದ ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ವಕೀಲರಿಂದ ಸ್ಪಷ್ಟನೆ ಕೇಳಿ ತೀರ್ಪು ಮುಂದೂಡಿಕೆ ಮಾಡಿದ್ದಾರೆ.
ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪದಡಿ ಪ್ರಜ್ವಲ್ ರೇವಣ್ಣ ವಿರುದ್ಧ ನಾಲ್ಕು ಪ್ರಕರಣ ದಾಖಲಾಗಿದೆ. ಇವುಗಳಲ್ಲಿ ಸಿಐಡಿ ಸೈಬರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣ ಸಂಬಂಧ ಸಿಐಡಿ ಎಸ್‌ಐಟಿ ಅಧಿಕಾರಿಗಳು ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಪ್ರಕಟವಾಗುತ್ತಿರುವ ಮೊದಲ ತೀರ್ಪು ಇದಾಗಿದೆ.
ಇತಿಹಾಸದ ಅತ್ಯಂತ ದುಬಾರಿ ಭೂಸರ್ವೇಕ್ಷಣಾ ಉಪಗ್ರಹ ನಿಸಾರ್ ಇಂದು ಬಾಹ್ಯಾಕಾಶದತ್ತ ಹಾರಾಟ
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


