Saturday, November 7, 2026
spot_img
More
    spot_img
    HomeLatest newsಭೀಮಾ ನದಿ ಪ್ರವಾಹಕ್ಕೆ ಕಲ್ಯಾಣ ಕರ್ನಾಟಕ ತತ್ತರ: ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ

    ಭೀಮಾ ನದಿ ಪ್ರವಾಹಕ್ಕೆ ಕಲ್ಯಾಣ ಕರ್ನಾಟಕ ತತ್ತರ: ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ

    ಕಲಬುರ್ಗಿ: ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದ್ದು, ಅದರಲ್ಲಿಯೂ ಭೀಮ ನದಿ ಪ್ರವಾಹಕ್ಕೆ ಕಲ್ಯಾಣ ಕರ್ನಾಟಕದ ಜಿಲ್ಲೆಗಳು ತತ್ತರಿಸಿ ಹೋಗಿವೆ.

    ಕೃಷಿ ಭೂಮಿ, ಗ್ರಾಮಗಳೇ ಜಲಾವೃತಗೊಂಡಿದ್ದು, ಬೆಳೆದ ಬೆಳೆ ಸಂಪೂರ್ಣ ನಾಶವಾಗಿ ರೈತರು ತೀವ್ರ ಕಂಗಾಲಾಗಿದ್ದಾರೆ.

    ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಬುರ್ಗಿ ವಿಮಾನ‌ ನಿಲ್ದಾಣಕ್ಕೆ ಆಗಮಿಸಿ, ಪ್ರವಾಹದಿಂದಾಗಿ ಭೀಮಾ ತೀರದ ಪ್ರದೇಶಗಳಲ್ಲಿ ಉಂಟಾಗಿರುವ ಹಾನಿ ಬಗ್ಗೆ ವಿಮಾನ‌ ನಿಲ್ದಾಣದಲ್ಲೇ ಪ್ರಾಥಮಿಕ ಸಭೆ ನಡೆಸಿ ವಿವರವಾದ ಮಾಹಿತಿ ಪಡೆದರು.

    ಕಲಬುರಗಿ, ಬೀದರ್, ಯಾದಗಿರಿ ಹಾಗು ವಿಜಯಪುರ ಜಿಲ್ಲಾ ಅಧಿಕಾರಿಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳು ಸಭೆಯಲ್ಲಿದ್ದು, ವಿವರಗಳನ್ನು ನೀಡಿದರು.

    ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರಾದ ಎಂ.ಬಿ‌.ಪಾಟೀಲ್, ಕೃಷ್ಣ ಬೈರೇಗೌಡ ಮತ್ತು ಪ್ರಿಯಾಂಕ್ ಖರ್ಗೆ ಅವರ ಜೊತೆಯಲ್ಲಿ ಮೊದಲ ಸುತ್ತಿನ‌ ವೈಮಾನಿಕ ಸಮೀಕ್ಷೆ ನಡೆಸಿದರು.

    ಇದಾದ ಬಳಿಕ ಬೀದರ್ ಜಿಲ್ಲಾ ವ್ಯಾಪ್ತಿಯಲ್ಲಿನ ಬೆಳೆ ಹಾನಿ ಕುರಿತು ಎರಡನೇ ಸುತ್ತಿನ ವೈಮಾನಿಕ ಸಮೀಕ್ಷೆ ನಡೆಸಿದರು.

    ಸ್ಟಾಲಿನ್‌ ಸರ್‌ ಟಾರ್ಗೆಟ್‌ ಮಾಡುವುದಾದರೆ ನನ್ನನ್ನು ಮಾಡಿ ಜನರನ್ನು ಟಾರ್ಗೆಟ್‌ ಮಾಡಬೇಡಿ; ಕಾಲ್ತುಳಿತದ ಬಗ್ಗೆ ವಿಜಯ್‌ ಪ್ರತಿಕ್ರಿಯೆ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search