Friday, November 6, 2026
spot_img
More
    spot_img
    HomeBreaking NewsBreaking news: ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಕೆಟ್ಟು ನಿಂತ ರೈಲು

    Breaking news: ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಕೆಟ್ಟು ನಿಂತ ರೈಲು

    ಬೆಂಗಳೂರು ನಗರದಲ್ಲಿ ನಮ್ಮ ಮೆಟ್ರೋ ಸಂಚಾರದಲ್ಲಿ ಸಮಸ್ಯೆ ಉಂಟಾಗಿದೆ. ನೇರಳೆ ಮಾರ್ಗದಲ್ಲಿ ರೈಲು ಕೆಟ್ಟು ನಿಂತಿದ್ದು, ಸಾಮಾಜಿಕ ಜಾಲತಾಣದಲ್ಲಿ ಹಲವು ಪ್ರಯಾಣಿಕರು ಪೋಸ್ಟ್ ಹಾಕುತ್ತಿದ್ದಾರೆ.

    ಗುರುವಾರ ಬೆಳಗ್ಗೆ ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಹೊಸಹಳ್ಳಿ ಮತ್ತು ವಿಜಯನಗರ ನಿಲ್ದಾಣದ ನಡುವೆ ನಮ್ಮ ಮೆಟ್ರೋ ರೈಲು ಕೆಟ್ಟು ನಿಂತಿದೆ. ಇದರಿಂದಾಗಿ ಕೆಂಗೇರಿ ಕಡೆಗೆ ನಮ್ಮ ಮೆಟ್ರೋ ರೈಲು ಸಂಚಾರ ಸ್ಥಗಿತಗೊಂಡಿದೆ.

    ರೈಲು ಕೆಟ್ಟು ನಿಂತ ಕುರಿತು ಬಿಎಂಆರ್‌ಸಿಎಲ್ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ. ಆದರೆ ಹಲವು ಪ್ರಯಾಣಿಕರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ಗಳನ್ನು ಹಾಕುತ್ತಿದ್ದು, ತಾಂತ್ರಿಕ ಕಾರಣಕ್ಕೆ ರೈಲು ಸಂಚಾರ ಇನ್ನಷ್ಟು ತಡವಾಗಲಿದೆ ಎಂದು ಹೇಳುತ್ತಿದ್ದಾರೆ.

    ಹಳದಿ, ಹಸಿರು ಮಾರ್ಗದಲ್ಲಿ ನಮ್ಮ ಮೆಟ್ರೋ ರೈಲುಗಳು ಎಂದಿನಂತೆ ಸಂಚಾರವನ್ನು ನಡೆಸುತ್ತಿದೆ. ಆದರೆ ನೇರಳೆ ಮಾರ್ಗದಲ್ಲಿ ಕೆಂಗೇರಿ ವಿಜಯನಗರ ನಡುವೆ ಮಾತ್ರ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ಕಾರ್ಯವನ್ನು ಕೈಗೊಂಡಿದ್ದಾರೆ.

    ಸದ್ಯಕ್ಕೆ ಲಭ್ಯವಾಗಿರುವ ಮಾಹಿತಿಯಂತೆ ಕೆಟ್ಟುನಿಂತ ರೈಲನ್ನು ಚಲ್ಲಘಟ್ಟ ಡಿಪೋಗೆ ತೆಗೆದುಕೊಂಡು ಹೋಗಲಾಗುತ್ತದೆ. ಬಳಿಕ ನೇರಳೆ ಮಾರ್ಗದಲ್ಲಿ ರೈಲುಗಳ ಸಂಚಾರ ಪ್ರಾರಂಭವಾಗಲಿದೆ. ಬೆಳಗ್ಗೆ 8.50ರಿಂದ ರೈಲುಗಳ ಸಂಚಾರದಲ್ಲಿ ತೊಂದರೆಯಾಗುತ್ತಿದೆ ಎಂದು ಪ್ರಯಾಣಿಕರೊಬ್ಬರು ಪೋಸ್ಟ್ ಹಾಕಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search