ಕೋಯಿಕ್ಕೋಡ್: ಸಾರ್ವಜನಿಕರು ಕೇಂದ್ರ ಬಿಜೆಪಿಯಿಂದ ಎದುರಿಸುತ್ತಿರುವ ಸವಾಲುಗಳು ಭೂಕುಸಿತದಂತಿವೆ. ಅವುಗಳಿಗೆ ಯಾವುದೇ ನಿಯಮ ಅಥವಾ ವಿವರಣೆಗಳಿಲ್ಲ ಎಂದು ವಯನಾಡು ಕ್ಷೇತ್ರದ ನೂತನ ಸಂಸದೆ ಪ್ರಿಯಾಂಕಾ ಗಾಂಧಿ ಕಿಡಿಕಾರಿದ್ದಾರೆ.
ವಯನಾಡು ಲೋಕಸಭಾ ಉಪಚುನಾವಣೆಯಲ್ಲಿ ದಾಖಲೆಮಟ್ಟದ ಅಂತರದಿಂದ ಗೆಲುವು ಸಾಧಿಸಿದ್ದ ಪ್ರಿಯಾಂಕಾ ಗಾಂಧಿ ಅವರಿಂದು ವಯನಾಡಿನಲ್ಲಿ ಆಯೋಜಿಸಿದ್ದ ಮೊದಲ ಸಾರ್ವಜನಿಕ ಸಮಾವೇಶದಲ್ಲಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ವೇಳೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಿಂದ ಯಾವುದೇ ರೀತಿಯ ಪ್ರಜಾಸತ್ತಾತ್ಮಕ ನಡವಳಿಕೆಯಾಗಲಿ ಅಥವಾ ಅಭಿವೃದ್ಧಿ ಕಾರ್ಯಗಳಾಗಲಿ ಪಾಲನೆಯಾಗುತ್ತಿಲ್ಲ. ಅಲ್ಲದೇ ಅವುಗಳನ್ನು ರಾಜಕೀಯ ಹೋರಾಟದಲ್ಲೂ ಅನುಸರಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಇನ್ನು ನಾನು ಈ ಕ್ಷೇತ್ರದಿಂದ ಜನಪ್ರತಿನಿಧಿಯಾಗಿ ಆಯ್ಕೆಯಾಗಿರುವುದರಿಂದ ನಿಮ್ಮ ಧ್ವನಿಯಾಗಿದ್ದೇನೆ. ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸುತ್ತೇನೆ. ಹೀಗಾಗಿ ನಿಮ್ಮ ನಂಬಿಕೆ, ಮೌಲ್ಯ ಮತ್ತು ಆಕಾಂಕ್ಷೆಗಳನ್ನು ಈಡೇರಿಸುತ್ತೇನೆ ಎಂದು ವಯನಾಡು ಜನತೆಗೆ ಆಶ್ವಾಸನೆ ನೀಡಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


