ಮೈಸೂರು: ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಸಚಿವ ಸಂಪುಟಕ್ಕೆ ಸರ್ಜರಿ ಬಗ್ಗೆ ಚರ್ಚೆಯಾಗುತ್ತಿದೆ. ಆದ್ದರಿಂದ ನನಗೂ ಕೂಡ ಸಚಿವ ಸ್ಥಾನ ನೀಡಲಿ ಎಂದು ಆಗ್ರಹಿಸಿದರು.
ಇನ್ನು ಜನ ನನ್ನನ್ನು ಆಯ್ಕೆ ಮಾಡಿದ್ದಾರೆ. ನಮ್ಮ ಕುಟುಂಬಕ್ಕೆ ಸುದೀರ್ಘ ಚುನಾವಣಾ ರಾಜಕೀಯ ಇತಿಹಾಸವಿದೆ. ಕಳೆದ ಬಾರಿಯೇ ಸಚಿವ ಸ್ಥಾನ ಸಿಗುವ ವಿಶ್ವಾಸ ಇತ್ತು. ಆದರೆ ಕಳೆದ ಬಾರಿ ಯಾವ ಕಾರಣಕ್ಕೆ ಸಚಿವ ಸ್ಥಾನ ತಪ್ಪಿ ಹೋಗಿತ್ತು ಗೊತ್ತಿಲ್ಲ ಎಂದರು.
ಇನ್ನು ಬಹುಮತದ ಸರ್ಕಾರ ಬಂದಾಗ ಸಚಿವ ಸ್ಥಾನ ಸಿಗುವುದು ತುಂಬಾ ಕಷ್ಟವಾಗುತ್ತದೆ. ಲೋಕಸಭಾ ಚುನಾವಣೆ ನಡೆದ ವೇಳೆಯಿಂದಲೂ ಸಚಿವ ಸ್ಥಾನ ವಿಸ್ತರಣೆ ಬಗ್ಗೆ ಚರ್ಚೆಯಾಗುತ್ತಿದೆ. ನಾನು ಸಚಿವ ಸ್ಥಾನ ಕೊಡಿ ಎಂದು ಯಾರ ಬಳಿಯೂ ಕೇಳಿಲ್ಲ. ಪಕ್ಷದ ವರಿಷ್ಠರ ಮೇಲೆ ನನಗೆ ತುಂಬಾ ನಂಬಿಕೆಯಿದೆ. ಸಚಿವ ಸ್ಥಾನದ ಪಟ್ಟಿಯಲ್ಲಿ ಈ ಬಾರಿ ನನ್ನ ಹೆಸರಿದೆ. ಆದ್ದರಿಂದ ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಮೂಲಕ ಈ ಬಾರಿ ಮೈಸೂರು ಭಾಗದ ಶಾಸಕರಿಗೆ ಸಚಿವ ಸ್ಥಾನ ಸಿಗುವುದು ಪಕ್ಕಾ ಎನ್ನಲಾಗಿದ್ದು, ಶಾಸಕ ತನ್ವೀರ್ ಸೇಠ್‌ಗೆ ಸಚಿವ ಸ್ಥಾನ ಸಿಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


