ಚಾಮರಾಜನಗರ: ಸಿಎಂ ಮನಸ್ಸಲ್ಲಿ ನಾನಿದ್ದೇನೆ. ಈ ಬಾರಿ ನನಗೆ ಸಚಿವ ಸ್ಥಾನ ಸಿಕ್ಕೆ ಸಿಗುತ್ತದೆ ಎಂದು ಶಾಸಕ ಸಿ. ಪುಟ್ಟರಂಗಶೆಟ್ಟಿ ಸಚಿವ ಸ್ಥಾನದ ಆಸೆ ಬಿಚ್ಚಿಟ್ಟಿದ್ದಾರೆ.
ಈ ಬಗ್ಗೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಮಾತನಾಡಿದ ಅವರು, 136 ಸೀಟು ಗೆದ್ದು ಸಂಪುಟ ರಚನೆ ವೇಳೆ ನನ್ನ ಹೆಸರಿತ್ತು. ನನಗೆ ಕಳೆದ ಬಾರಿಯೇ ಸಚಿವ ಸ್ಥಾ ಕೊಡಬೇಕು ಎಂದು ತೀರ್ಮಾನ ಮಾಡಲಾಗಿತ್ತು. ಆದರೆ ಕಾರಣಾಂತರಗಳಿಂದ ಸಚಿವ ಸ್ಥಾನ ಕೈ ತಪ್ಪಿತ್ತು ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಈ ಬಾರಿ ಸಂಪುಟ ಪುನಾರಚನೆ ಆದ್ರೆ ಸಚಿವ ಸ್ಥಾನ ಕೊಡ್ತಾರೆ. ಜಾತಿವಾರು, ಜಿಲ್ಲಾವಾರು ನೋಡಿದರೂ ಕೂಡ ನನಗೆ ಸಚಿವ ಸ್ಥಾನ ಕೊಡಬೇಕು. ನಾನು ಕೂಡ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕನಾಗಿದ್ದೇನೆ. ಕಾಂಗ್ರೆಸ್ ಹೈಕಮಾಂಡ್ ಮೇಲೆ ನನಗೆ ಸಂಪೂರ್ಣ ನಂಬಿಕೆಯಿದೆ. ಈ ಬಾರಿ ನನಗೂ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


