Saturday, August 8, 2026
spot_img
More
    spot_img
    HomeStateವಿಶ್ವಗುರು ಬಸವಣ್ಣನವರ ಬಗ್ಗೆ ಯತ್ನಾಳ್‌ ವಿವಾದಾತ್ಮಕ ಹೇಳಿಕೆಗೆ ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿ

    ವಿಶ್ವಗುರು ಬಸವಣ್ಣನವರ ಬಗ್ಗೆ ಯತ್ನಾಳ್‌ ವಿವಾದಾತ್ಮಕ ಹೇಳಿಕೆಗೆ ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿ

    ಬೆಂಗಳೂರು: ಕೆಲ ದಿನಗಳ ಹಿಂದೆ ನಾಡಿನ ಜನ ವೇದಿಕೆಯಿಂದ ಕೆಳಗಿಳಿಸಿ ಓಡಿಸಿದ್ದರೂ ಬುದ್ದಿ ಕಲಿಯದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರು ಬಸವಣ್ಣನವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಅವರ ನಾಲಿಗೆಗೆ ಕಡಿವಾಣ ಹಾಕುವ ಶಕ್ತಿ ಕರ್ನಾಟಕದ ಜನರಿಗಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿಕಾರಿದ್ದಾರೆ.

    Advertisement

    ಬಸನಗೌಡ ಪಾಟೀಲ ಯತ್ನಾಳ್‌ ಅವರು ವಕ್ಫ್‌ ಮಂಡಳಿ ವಿರುದ್ಧದ ಪ್ರತಿಭಟನೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ವೇಳೆ, ನಾವು ಹೋರಾಟ ಮಾಡಲು ಹೆದರಿದರೆ ಬಸವಣ್ಣನವರ ಹಾಗೇ ನದಿಗೆ ಹಾರಿ ಸಾಯಬೇಕಾಗುತ್ತದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

    ಈ ಕುರಿತು ಸಚಿವ ಪ್ರಿಯಾಂಕ್‌ ಖರ್ಗೆ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿದ್ದು, ಜಗಜ್ಯೋತಿ ಬಸವಣ್ಣನವರ ಬಗ್ಗೆ ಅತ್ಯಂತ ಅವಮಾನಕರವಾಗಿ, ಅತ್ಯಂತ ಹಗುರವಾಗಿ ಮಾತನಾಡಿರುವ ಬಿಜೆಪಿ ಶಾಸಕ ಯತ್ನಾಳ್ ಅವರು ಕ್ಷಮಿಸಲಾರದ ತಪ್ಪೆಸಗಿದ್ದಾರೆ. ಅಲ್ಲದೇ ಕಾಂಗ್ರೆಸ್ ನಾಯಕರು, ಅಲ್ಪಸಂಖ್ಯಾತರ ಬಗ್ಗೆ ಮನಸೋ ಇಚ್ಛೆ ಮಾತನಾಡುತ್ತಿದ್ದ ಬಿಜೆಪಿಯವರ ನಾಲಿಗೆಗಳು ಈಗ ಸಮಾಜ ಸುಧಾರಣೆಗೆ ಜೀವ ಸವೆಸಿದ ಮಹನೀಯರ ಬುಡಕ್ಕೂ ಚಾಚುವಷ್ಟು ಉದ್ದವಾಗಿವೆ ಎಂದು ವಾಗ್ದಾಳಿ ನಡೆಸಿದ್ದಾರೆ.

    ಬಸವಣ್ಣನವರ ಹಾಗೆ ಹೊಳೆ ಹಾರಬೇಕು ಎನ್ನುವ ಮೂಲಕ ಬಸವಣ್ಣನವರನ್ನು ಪಲಾಯನವಾದಿ ಎಂಬರ್ಥದಲ್ಲಿ ಮಾತನಾಡಿದ ಯತ್ನಾಳ್ ಅವರನ್ನು ಈ ನಾಡಿನ ಪ್ರಜ್ಞಾವಂತ ಬಸವಾನುಯಾಯಿಗಳು ಗಟ್ಟಿ ಧ್ವನಿಯಲ್ಲಿ ಖಂಡಿಸಬೇಕಿದೆ. ತನ್ನ ಬಣ್ಣಿಸಬೇಡ, ಇದಿರು ಹಳಿಯಬೇಡ ಎಂದಿದ್ದ ಬಸವಣ್ಣನವರ ಹೆಸರನ್ನು ಯತ್ನಾಳ್ ಅವರು ತಮ್ಮ ದ್ವೇಷ ಭಾಷಣಕ್ಕೆ ಬಳಸಿದ್ದು ಮತ್ತೊಂದು ಘೋರ ಅಪರಾಧ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಯತ್ನಾಳ್ ಅವರೇ, ಬಸವಣ್ಣನವರು ಹೊಳೆಗೆ ಹಾರಿಲ್ಲ, ಈ ಸಮಾಜಕ್ಕೆ ಜ್ಞಾನದ ಹೊಳೆ ಹರಿಸಿದ್ದಾರೆ. ನಿಮ್ಮ ಪ್ರಕಾರ ಬಸವಣ್ಣನವರು ಹೊಳೆಗೆ ಹಾರಿದ್ದಾರೆ ಎನ್ನುವುದಾದರೆ ಅವರನ್ನು ಹೊಳೆಗೆ ಹಾರುವಂತೆ ಮಾಡಿದವರು ಯಾರು? ಇಂದು ಯತ್ನಾಳ್ ಅವರು ಪ್ರತಿಪಾದಿಸುತ್ತಿರುವ ಸಿದ್ಧಾಂತವೇ ಅಂದು ಬಸವಾದಿ ಶರಣರನ್ನು ಹಿಂಸಿಸಿದ್ದಲ್ಲವೇ? ಎಂದು ಪ್ರಶ್ನಿಸಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading