ನವದೆಹಲಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತ ಹೇಳಿಕೆಗಳಿಗೆ ಡಿಸಿಎಂ ಡಿ.ಕೆ.ಶಿವವಕುಮಾರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ನವದೆಹಲಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ರಾಜಕೀಯ ಚರ್ಚೆ ಮಾಡುವುದು ಒಳ್ಳೆಯದಲ್ಲ. ಇದು ಯಾವ ಪಕ್ಷದವರಿಗೂ ಹಾಗೂ ಯಾರಿಗೂ ಸೂಕ್ತವಾದುದಲ್ಲ ಎಂದರು.
ಇನ್ನು ಸಚಿವ ಸಂಪುಟ ಪುನರ್ ರಚನೆಯ ಕುರಿತು ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಮಾಡುವ ಯಾವುದೇ ಸಂದರ್ಭ ಬಂದಿಲ್ಲ. ಕೇವಲ ಒಂದು ಸಚಿವ ಸ್ಥಾನ ಖಾಲಿಯಿದ್ದು, ಅದನ್ನು ತುಂಬುವ ಚರ್ಚೆಯೂ ನಡೆದಿಲ್ಲ ಎಂದರು.
ಇನ್ನು ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿಯ ಬಗ್ಗೆ ಕೇಳಿದಾಗ ಉತ್ತರಿಸಿದ ಅವರು, ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್ ಅಧಿವೇಶನದಲ್ಲಿ ಪಕ್ಷದ ಅಧ್ಯಕ್ಷರಾಗಿ ಮಹಾತ್ಮ ಗಾಂಧಿಯವರು ಅಧಿಕಾರ ವಹಿಸಿಕೊಂಡು ನೂರು ವರ್ಷಗಳಾಗಿದೆ. ಈ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚಿಸಲು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿದ್ದೆ ಅಷ್ಟೆ ಎಂದು ಸ್ಪಷ್ಟಪಡಿಸಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


