ಕನ್ನಡ ಚಿತ್ರರಂಗ ಕಂಡ ಹಿರಿಯ ಹಾಸ್ಯ ನಟ ಎಂಎಸ್ ಉಮೇಶ್ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯ ಸಮಸ್ಯೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಉಮೇಶ್ ರವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.
ಇತ್ತೀಚಿಗಷ್ಟೇ ಮನೆಯಲ್ಲಿ ಕಾಲು ಜಾರಿ ಬಿದ್ದ ಕಾರಣ ಆಸ್ಪತ್ರೆಗೆ ದಾಖಲಿಸಿದ್ದ ಉಮೇಶ್ ಅವರಿಗೆ ಲಿವರ್ ಕ್ಯಾನ್ಸರ್ ಇರುವುದು ಪರೀಕ್ಷೆ ವೇಳೆ ಪತ್ತೆಯಾಗಿತ್ತು. 4ನೇ ಹಂತದ ಲಿವರ್ ಕ್ಯಾನ್ಸರ್ ತಲುಪಿದ್ದ ಉಮೇಶ್ ಅವರು ಕಿಮೋಥೇರೇಪಿ ಮೂಲಕ ಚೇತರಿಸಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೆ ಉಮೇಶ್ ನಿಧನ ಹೊಂದಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


