Saturday, March 28, 2026
spot_img
More
    spot_img
    HomeSportsCricketವಿರಾಟ್ ಕೊಹ್ಲಿ ಅಬ್ಬರದ ಶತಕ: ದಕ್ಷಿಣ ಆಫ್ರಿಕಾಗೆ ಸವಾಲಿನ ಗುರಿ ನೀಡಿದ ಭಾರತ

    ವಿರಾಟ್ ಕೊಹ್ಲಿ ಅಬ್ಬರದ ಶತಕ: ದಕ್ಷಿಣ ಆಫ್ರಿಕಾಗೆ ಸವಾಲಿನ ಗುರಿ ನೀಡಿದ ಭಾರತ

    ರಾಂಚಿ (ನವೆಂಬರ್ 30, 2025): ಜೆಎಸ್‌ಸಿಎ ಕ್ರೀಡಾಂಗಣದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವೆ ನಡೆಯುತ್ತಿರುವ ಪ್ರಥಮ ಏಕದಿನ ಪಂದ್ಯದಲ್ಲಿ ಭಾರತ ಮೊದಲು ಬ್ಯಾಟಿಂಗ್ ಮಾಡಿ ವಿರಾಟ್ ಕೊಹ್ಲಿ ಅಬ್ಬರದ ಬ್ಯಾಟಿಂಗ್ ನೆರವಿನಿಂದ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 349 ರನ್ ಕಲೆಹಾಕಿ ದಕ್ಷಿಣ ಆಫ್ರಿಕಾಗೆ 350 ರನ್‌ಗಳ ಸವಾಲಿನ ಗುರಿಯನ್ನು ನೀಡಿದೆ.

    ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತದ ಪರ ಯಶಸ್ವಿ ಜೈಸ್ವಾಲ್ ಹಾಗೂ ರೋಹಿತ್ ಶರ್ಮಾ ಆರಂಭಿಕ ಆಟಗಾರರಾಗಿ ಕಣಕ್ಕಿಳಿದರು. ನಾಲ್ಕನೇ ಓವರ್‌ನಲ್ಲಿ ಯಶಸ್ವಿ ಜೈಸ್ವಾಲ್ 18 ರನ್‌ಗಳಿಗೆ ಔಟ್ ಆದರು. ಆ ಬಳಿಕ ಎರಡನೇ ವಿಕೆಟ್‌ಗೆ ಜತೆಯಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಜೋಡಿ 136 ರನ್‌ಗಳ ಜತೆಯಾಟವನ್ನಾಡಿತು.

    ರೋಹಿತ್ 57 ರನ್ ಗಳಿಸಿ ಔಟ್ ಆದರೆ, ವಿರಾಟ್ ಕೊಹ್ಲಿ 120 ಎಸೆತಗಳಲ್ಲಿ 135 ರನ್ ಬಾರಿಸಿ ಅಬ್ಬರಿಸಿದರು. ಇನ್ನುಳಿದಂತೆ ರುತುರಾಜ್ ಗಾಯಕ್ವಾಡ್ 8, ವಾಷಿಂಗ್ಟನ್ ಸುಂದರ್ 13, ಕೆಎಲ್ ರಾಹುಲ್ 60, ರವೀಂದ್ರ ಜಡೇಜಾ 32, ಅರ್ಷ್‌ದೀಪ್ ಸಿಂಗ್ ಡಕ್‌ಔಟ್, ಹರ್ಷಿತ್ ರಾಣಾ ಅಜೇಯ 3 ರನ್ ಹಾಗೂ ಯಾವುದೇ ರನ್ ಗಳಿಸದ ಕುಲ್‌ದೀಪ್ ಯಾದವ್ ಅಜೇಯರಾಗಿ ಉಳಿದರು.

    ದಕ್ಷಿಣ ಆಫ್ರಿಕಾ ಪರ ಮಾರ್ಕೊ ಯಾನ್‌ಸೆನ್, ನಾಂಡ್ರೆ ಬರ್ಗರ್, ಕಾರ್ಬಿನ್ ಬಾಷ್ ಹಾಗೂ ಆಟ್‌ನೈಲ್ ಬ್ರಾಟ್‌ಮನ್ ತಲಾ ಎರಡು ವಿಕೆಟ್ ಪಡೆದರು.

    ರಜನಿಕಾಂತ್‌ ಕರೆದರೂ ತಮಿಳಿಗೆ ಹೋಗಲಿಲ್ಲ ಉಮೇಶ್;‌ ಕಂಬನಿ ಮಿಡಿದ ಟೆನ್ನಿಸ್‌ ಕೃಷ್ಣ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಬ್ರೇಕಿಂಗ್ರಾ! ಮನವಮಿ ಹಬ್ಬಕ್ಕೆ ಮಾರುಕಟ್ಟೆ ಬಂದ್ ಆಗುತ್ತಾ? ಹೂಡಿಕೆದಾರರಿಗೆ ಕ್ಲಿಯರ್ ಮಾಹಿತಿ!

    “ಸ್ಟಾಕ್ ಮಾರ್ಕೆಟ್ ಹಾಲಿಡೇ 2026” ಇದೀಗ ಹೂಡಿಕೆದಾರರಲ್ಲಿ ದೊಡ್ಡ ಗೊಂದಲ ಮೂಡಿಸಿದೆ. ರಾಮನವಮಿ ಹಬ್ಬದ ಹಿನ್ನೆಲೆಯಲ್ಲಿ ಗುರುವಾರ ಅಥವಾ ಶುಕ್ರವಾರ ಷೇರು ಮಾರುಕಟ್ಟೆ ಬಂದ್ ಆಗುತ್ತದೆಯಾ? ಎಂಬ ಪ್ರಶ್ನೆ ಟ್ರೇಡರ್‌ಗಳ ನಡುವೆ ಭಾರೀ...

    ಬ್ರೇಕಿಂಗ್! ಮಾರುಕಟ್ಟೆ ರಾಕೆಟ್—ಸೆನ್ಸೆಕ್ಸ್ 1300 ಪಾಯಿಂಟ್ ಜಿಗಿತ! ರೂಪಾಯಿ ಕುಸಿತ, ಚಿನ್ನ ಏರಿಕೆ… ಏನಿದು ಮಿಶ್ರ ಸಿಗ್ನಲ್?

    “ಸ್ಟಾಕ್ ಮಾರ್ಕೆಟ್ 24 ಮಾರ್ಚ್ 2026” ಹೂಡಿಕೆದಾರರಿಗೆ ಒಂದೇ ದಿನದಲ್ಲಿ ರೋಲರ್ ಕೋಸ್ಟರ್ ಅನುಭವ ನೀಡಿದೆ! ಒಂದೆಡೆ ಷೇರು ಮಾರುಕಟ್ಟೆ ಭರ್ಜರಿ ಏರಿಕೆ ಕಂಡಿದ್ದರೆ, ಇನ್ನೊಂದೆಡೆ ರೂಪಾಯಿ ಕುಸಿತ ಮತ್ತು ಚಿನ್ನದ ಬೆಲೆ...

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading