Tuesday, November 3, 2026
spot_img
More
    spot_img
    HomeSportsCricket52ನೇ ಏಕದಿನ ಶತಕ ಬಾರಿಸಿದ ಕೊಹ್ಲಿ: ಸಚಿನ್ ತೆಂಡೂಲ್ಕರ್ ಅತಿಹೆಚ್ಚು ಶತಕ ದಾಖಲೆ ಧೂಳೀಪಟ

    52ನೇ ಏಕದಿನ ಶತಕ ಬಾರಿಸಿದ ಕೊಹ್ಲಿ: ಸಚಿನ್ ತೆಂಡೂಲ್ಕರ್ ಅತಿಹೆಚ್ಚು ಶತಕ ದಾಖಲೆ ಧೂಳೀಪಟ

    ರಾಂಚಿ (ನವೆಂಬರ್ 30, 2025): ಜೆಎಸ್‌ಸಿಎ ಕ್ರೀಡಾಂಗಣದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವೆ ನಡೆಯುತ್ತಿರುವ ಪ್ರಥಮ ಏಕದಿನ ಪಂದ್ಯದಲ್ಲಿ ಭಾರತ ಮೊದಲು ಬ್ಯಾಟಿಂಗ್ ಮಾಡಿ ವಿರಾಟ್ ಕೊಹ್ಲಿ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಬೃಹತ್ ಮೊತ್ತದತ್ತ ದಾಪುಗಾಲಿಟ್ಟಿದೆ.

    ಮೊದಲು ಬ್ಯಾಟಿಂಗ್ ಮಾಡಿರುವ ಭಾರತದ ಪರ ಯಶಸ್ವಿ ಜೈಸ್ವಾಲ್ ಹಾಗೂ ರೋಹಿತ್ ಶರ್ಮಾ ಆರಂಭಿಕ ಆಟಗಾರರಾಗಿ ಕಣಕ್ಕಿಳಿದರು. ನಾಲ್ಕನೇ ಓವರ್‌ನಲ್ಲಿ ಯಶಸ್ವಿ ಜೈಸ್ವಾಲ್ 18 ರನ್‌ಗಳಿಗೆ ಔಟ್ ಆದರು. ಆ ಬಳಿಕ ಎರಡನೇ ವಿಕೆಟ್‌ಗೆ ಜತೆಯಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಜೋಡಿ 136 ರನ್‌ಗಳ ಜತೆಯಾಟವನ್ನಾಡಿತು.

    ರೋಹಿತ್ 57 ರನ್ ಗಳಿಸಿ ಔಟ್ ಆದರೆ, ವಿರಾಟ್ ಕೊಹ್ಲಿ 102 ಎಸೆತಗಳಲ್ಲಿ ಶತಕ ಬಾರಿಸಿ ತಮ್ಮ ಆಟ ಮುಂದುವರಿಸಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ಕೊಹ್ಲಿ ತಮ್ಮ 52ನೇ ಶತಕ ಬಾರಿಸಿದ್ದಾರೆ. ಈ ಮೂಲಕ ಕೊಹ್ಲಿ ಎಲ್ಲ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 83 ಶತಕಗಳನ್ನು ಪೂರೈಸಿದ್ದಾರೆ.

    ಈ ಶತಕದಿಂದ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ಒಂದೇ ಮಾದರಿ ಕ್ರಿಕೆಟ್‌ನಲ್ಲಿ ಅತಿಹೆಚ್ಚು ಶತಕ ದಾಖಲೆಯನ್ನು ವಿರಾಟ್ ಕೊಹ್ಲಿ ಮುರಿದು ಹಾಕಿದ್ದಾರೆ.

    ಸಚಿನ್ ತೆಂಡೂಲ್ಕರ್ ಟೆಸ್ಟ್ ಕ್ರಿಕೆಟ್‌ನಲ್ಲಿ 51 ಶತಕಗಳನ್ನು ಬಾರಿಸುವ ಮೂಲಕ ಕ್ರಿಕೆಟ್ ಮಾದರಿಯೊಂದರಲ್ಲಿ ಅತಿಹೆಚ್ಚು ಶತಕ ಬಾರಿಸಿದ ಆಟಗಾರ ಎನಿಸಿಕೊಂಡಿದ್ದರು. ಇದೀಗ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ 52ನೇ ಶತಕ ಬಾರಿಸುವ ಮೂಲಕ ಈ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

    ಕ್ರಿಕೆಟ್ ಮಾದರಿಯೊಂದರಲ್ಲಿ ಅತಿಹೆಚ್ಚು ಶತಕ ಬಾರಿಸಿದ ಟಾಪ್ 5 ಬ್ಯಾಟ್ಸ್‌ಮನ್‌ಗಳು

    1. ವಿರಾಟ್ ಕೊಹ್ಲಿ – 52* ( ಏಕದಿನ )

    2. ಸಚಿನ್ ತೆಂಡೂಲ್ಕರ್ – 51 ( ಟೆಸ್ಟ್ )

    3 ಸಚಿನ್ ತೆಂಡೂಲ್ಕರ್ – 49 ( ಏಕದಿನ )

    4. ಜಾಕ್ಸ್ ಕಾಲೀಸ್ – 45 ( ಟೆಸ್ಟ್ )

    5. ರಿಕಿ ಪಾಂಟಿಂಗ್ – 41 ( ಟೆಸ್ಟ್ )

    ರಜನಿಕಾಂತ್‌ ಕರೆದರೂ ತಮಿಳಿಗೆ ಹೋಗಲಿಲ್ಲ ಉಮೇಶ್;‌ ಕಂಬನಿ ಮಿಡಿದ ಟೆನ್ನಿಸ್‌ ಕೃಷ್ಣ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search