Wednesday, November 4, 2026
spot_img
More
    spot_img
    HomeSportsCricketಕಿಂಗ್ ಈಸ್ ಬ್ಯಾಕ್: ಏಕದಿನ ಕ್ರಿಕೆಟ್‌ನಲ್ಲಿ 52ನೇ ಶತಕ ಬಾರಿಸಿದ ಕೊಹ್ಲಿ

    ಕಿಂಗ್ ಈಸ್ ಬ್ಯಾಕ್: ಏಕದಿನ ಕ್ರಿಕೆಟ್‌ನಲ್ಲಿ 52ನೇ ಶತಕ ಬಾರಿಸಿದ ಕೊಹ್ಲಿ

    ರಾಂಚಿ (ನವೆಂಬರ್ 30, 2025): ಜೆಎಸ್‌ಸಿಎ ಕ್ರೀಡಾಂಗಣದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಪ್ರಥಮ ಏಕದಿನ ಪಂದ್ಯ ನಡೆಯುತ್ತಿದ್ದು, ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಫೀಲ್ಡಿಂಗ್ ಆರಿಸಿಕೊಂಡು ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.

    ಅದರಂತೆ ಮೊದಲು ಬ್ಯಾಟಿಂಗ್ ಮಾಡಿರುವ ಭಾರತದ ಪರ ಯಶಸ್ವಿ ಜೈಸ್ವಾಲ್ ಹಾಗೂ ರೋಹಿತ್ ಶರ್ಮಾ ಆರಂಭಿಕ ಆಟಗಾರರಾಗಿ ಕಣಕ್ಕಿಳಿದರು. ನಾಲ್ಕನೇ ಓವರ್‌ನಲ್ಲಿ ಯಶಸ್ವಿ ಜೈಸ್ವಾಲ್ 18 ರನ್‌ಗಳಿಗೆ ಔಟ್ ಆದರು. ಆ ಬಳಿಕ ಎರಡನೇ ವಿಕೆಟ್‌ಗೆ ಜತೆಯಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಜೋಡಿ 136 ರನ್‌ಗಳ ಜತೆಯಾಟವನ್ನಾಡಿತು.

    ರೋಹಿತ್ 57 ರನ್ ಗಳಿಸಿ ಔಟ್ ಆದರೆ, ವಿರಾಟ್ ಕೊಹ್ಲಿ 102 ಎಸೆತಗಳಲ್ಲಿ ಶತಕ ಬಾರಿಸಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ಕೊಹ್ಲಿ ತಮ್ಮ 52ನೇ ಶತಕ ಬಾರಿಸಿದ ದಾಖಲೆ ಬರೆದಿದ್ದಾರೆ. ಕ್ರಿಕೆಟ್ ಇತಿಹಾಸದಲ್ಲಿ ಅತಿಹೆಚ್ಚು ಏಕದಿನ ಶತಕ ದಾಖಲೆಯಲ್ಲಿ ಈ ಹಿಂದೆಯೇ ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿದ ವಿರಾಟ್ ಕೊಹ್ಲಿ ಇದೀಗ ದಾಖಲೆಯನ್ನು ಮತ್ತಷ್ಟು ಬಲಿಷ್ಟಗೊಳಿಸಿಕೊಂಡಿದ್ದಾರೆ. ಈ ಮೂಲಕ ಹಲವು ದಿನಗಳ ಬಳಿಕ ಕಣಕ್ಕಿಳಿದು ಶತಕ ಬಾರಿಸಿದ ಕೊಹ್ಲಿ ‘ಕಿಂಗ್ ಈಸ್ ಬ್ಯಾಕ್’ ಎಂದು ಸಂದೇಶ ರವಾನಿಸಿದ್ದಾರೆ. ಎಲ್ಲ ಮಾದರಿಯ ಕ್ರಿಕೆಟ್‌ನಲ್ಲಿ ಕೊಹ್ಲಿ 83 ಶತಕಗಳನ್ನು ಪೂರೈಸಿದ್ದಾರೆ.

    ರಜನಿಕಾಂತ್‌ ಕರೆದರೂ ತಮಿಳಿಗೆ ಹೋಗಲಿಲ್ಲ ಉಮೇಶ್;‌ ಕಂಬನಿ ಮಿಡಿದ ಟೆನ್ನಿಸ್‌ ಕೃಷ್ಣ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search