ಬೆಂಗಳೂರು: 2026ರ ನವೆಂಬರ್‌ನಲ್ಲಿ ನಡೆಯಲಿರುವ ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಸಂಬಂಧಿಸಿದಂತೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಮಂಗಳವಾರ ತನ್ನ ಅಧಿಕೃತ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.
ವೇಣುಗೋಪಾಲ್ ಅವರಿಂದ ಪ್ರಕಟಣೆ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಾಲ್ವರು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಅನುಮೋದಿಸಿದ್ದಾರೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಗಳ ಅಧಿಕೃತ ಪಟ್ಟಿ
ವಿಧಾನ ಪರಿಷತ್ ಅಖಾಡಕ್ಕೆ ಇಳಿಯಲಿರುವ ಕಾಂಗ್ರೆಸ್‌ನ ಅಧಿಕೃತ ಅಭ್ಯರ್ಥಿಗಳ ವಿವರ ಇಲ್ಲಿದೆ:
ಪಶ್ಚಿಮ ಪದವೀಧರ ಕ್ಷೇತ್ರ: ಮೋಹನ್ ಲಿಂಬಿಕಾಯಿ
ಆಗ್ನೇಯ ಪದವೀಧರ ಕ್ಷೇತ್ರ: ಶಶಿ ಹುಲಿಕುಂಟೆಮಠ್
ಈಶಾನ್ಯ ಶಿಕ್ಷಕರ ಕ್ಷೇತ್ರ: ಶರಣಪ್ಪ ಮಟ್ಟೂರ್
ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ
ಚುನಾವಣೆಗೂ ಮುನ್ನವೇ ಅಭ್ಯರ್ಥಿಗಳನ್ನು ಘೋಷಿಸುವ ಮೂಲಕ ಕಾಂಗ್ರೆಸ್ ತನ್ನ ಚುನಾವಣಾ ಕಾರ್ಯತಂತ್ರವನ್ನು ಚುರುಕುಗೊಳಿಸಿದೆ.ಶಿಕ್ಷಕ ಮತ್ತು ಪದವೀಧರರ ವಲಯದಲ್ಲಿ ಚಿರಪರಿಚಿತವಿರುವ ಮುಖಗಳಿಗೆ ಈ ಬಾರಿ ಹೆಚ್ಚಿನ ಮನ್ನಣೆ ನೀಡಲಾಗಿದೆ.
ನಿಂಬೆ ರಸಕ್ಕಿಂತ ಅದರ ಸಿಪ್ಪೆಯೇ ಮೇಲು! ಈ ಅದ್ಭುತ ಪ್ರಯೋಜನಗಳನ್ನು ಮಿಸ್ ಮಾಡ್ಕೋಬೇಡಿ

Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


