Monday, August 3, 2026
spot_img
More
    spot_img
    HomeLatest newsವಿಧಾನ ಪರಿಷತ್ ಚುನಾವಣೆ 2026: ಕಾಂಗ್ರೆಸ್  ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಮಲ್ಲಿಕಾರ್ಜುನ ಖರ್ಗೆ

    ವಿಧಾನ ಪರಿಷತ್ ಚುನಾವಣೆ 2026: ಕಾಂಗ್ರೆಸ್  ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಮಲ್ಲಿಕಾರ್ಜುನ ಖರ್ಗೆ

    ಬೆಂಗಳೂರು: 2026ರ ನವೆಂಬರ್‌ನಲ್ಲಿ ನಡೆಯಲಿರುವ ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಸಂಬಂಧಿಸಿದಂತೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಮಂಗಳವಾರ ತನ್ನ ಅಧಿಕೃತ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.

    Advertisement

    ವೇಣುಗೋಪಾಲ್ ಅವರಿಂದ ಪ್ರಕಟಣೆ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಾಲ್ವರು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಅನುಮೋದಿಸಿದ್ದಾರೆ ಎಂದು ತಿಳಿಸಿದ್ದಾರೆ.

    ಕಾಂಗ್ರೆಸ್ ಅಭ್ಯರ್ಥಿಗಳ ಅಧಿಕೃತ ಪಟ್ಟಿ

    ವಿಧಾನ ಪರಿಷತ್ ಅಖಾಡಕ್ಕೆ ಇಳಿಯಲಿರುವ ಕಾಂಗ್ರೆಸ್‌ನ ಅಧಿಕೃತ ಅಭ್ಯರ್ಥಿಗಳ ವಿವರ ಇಲ್ಲಿದೆ:

    ಪಶ್ಚಿಮ ಪದವೀಧರ ಕ್ಷೇತ್ರ: ಮೋಹನ್ ಲಿಂಬಿಕಾಯಿ

    ಆಗ್ನೇಯ ಪದವೀಧರ ಕ್ಷೇತ್ರ: ಶಶಿ ಹುಲಿಕುಂಟೆಮಠ್‌

    ಈಶಾನ್ಯ ಶಿಕ್ಷಕರ ಕ್ಷೇತ್ರ: ಶರಣಪ್ಪ ಮಟ್ಟೂರ್

    ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ

    ಚುನಾವಣೆಗೂ ಮುನ್ನವೇ ಅಭ್ಯರ್ಥಿಗಳನ್ನು ಘೋಷಿಸುವ ಮೂಲಕ ಕಾಂಗ್ರೆಸ್ ತನ್ನ ಚುನಾವಣಾ ಕಾರ್ಯತಂತ್ರವನ್ನು ಚುರುಕುಗೊಳಿಸಿದೆ.ಶಿಕ್ಷಕ ಮತ್ತು ಪದವೀಧರರ ವಲಯದಲ್ಲಿ ಚಿರಪರಿಚಿತವಿರುವ ಮುಖಗಳಿಗೆ ಈ ಬಾರಿ ಹೆಚ್ಚಿನ ಮನ್ನಣೆ ನೀಡಲಾಗಿದೆ.

    ನಿಂಬೆ ರಸಕ್ಕಿಂತ ಅದರ ಸಿಪ್ಪೆಯೇ ಮೇಲು! ಈ ಅದ್ಭುತ ಪ್ರಯೋಜನಗಳನ್ನು ಮಿಸ್ ಮಾಡ್ಕೋಬೇಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading