ಬೆಂಗಳೂರು;ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಸರ್ಕಾರಿ ಅಧಿಕಾರಿಗಳ ಮನೆಗಳು ಮತ್ತು ಅವರಿಗೆ ಸೇರಿದ ಇತರೆ ಸ್ಥಳಗಳ ಮೇಲೆ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.ದಾಯಕ್ಕಿಂತ ಅಧಿಕ ಆಸ್ತಿ ಗಳಿಸಿದ್ದ ಹಿನ್ನೆಲೆಯಲ್ಲಿ ಬೆಳಗಾವಿ, ಬಾಗಲಕೋಟೆ ಹಾಗೂ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಬಾಗಲಕೋಟೆಯಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವು ಮನೆ, ಕಚೇರಿಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಬಾಗಲಕೋಟೆ ಜಿಲ್ಲೆಯ ಹೊಲಗೇರಿ ಗ್ರಾಮ ಪಂಚಾಯ್ತಿ ಪಿಡಿಒ ಹಿರೇಮಠ ಮನೆ (ವಿದ್ಯಾಗಿರಿ), ಕಚೇರಿ ಸೇರಿ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ರೇಡ್ ಮಾಡಿದ್ದಾರೆ. ಲೋಕಾಯುಕ್ತ ಡಿವೈಎಸ್‌ಪಿ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಐಷಾರಾಮಿ ಮನೆ ಮತ್ತು ಅಪಾರ ಪ್ರಮಾಣದ ಆಸ್ತಿ ಹೊಂದಿರುವ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ,ಹೂಲಗೇರಿ ಪಿಡಿಒ ಎಸ್.ಪಿ.ಹಿರೇಮಠ ಐಷಾರಾಮಿ ಮನೆ ಹೊಂದಿದ್ದು, ಇವರ ಮನೆಯಲ್ಲಿ ಪತ್ತೆಯಾಗಿರುವ ನಗದು ನೋಟುಗಳನ್ನು ಎಣಿಸಲು ಲೋಕಾ ಅಧಿಕಾರಿಗಳು ಮನೆಯೊಳಗೆ ಹಣ ಎಣಿಸುವ ಮಷಿನ್ ತೆಗೆದುಕೊಂಡು ಹೋಗಿದ್ದಾರೆ.
ಬೆಳಗಾವಿಯಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬೆಳಗಾವಿಯ ಪ್ರಭಾರಿ ಸಬ್ ರಿಜಿಸ್ಟ್ರಾರ್ ಸಚಿನ್ ಮಂಡೇದ್ ಅವರ ಬೆಳಗಾವಿ ನಗರದ ಆನಗೋಳದಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಮನೆ, ಕಚೇರಿ ಸೇರಿ ಮೂರು ಕಡೆಗಳಲ್ಲಿ ದಾಳಿ ನಡೆಸಲಾಗಿದೆ.ಲೋಕಾಯುಕ್ತ ಪೊಲೀಸರು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ
ರಾಯಚೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಿಲ್ಲಾ ಪಂಚಾಯತಿ ಲೆಕ್ಕಪತ್ರ ಸಹಾಯಕ ಅಧಿಕಾರಿ ನರಸಿಂಗರಾವ್ ಅವರ ಮನೆಯ ಮೇಲೆ ದಾಳಿ ನಡೆಸಲಾಗಿದೆ. ರಾಯಚೂರು ನಗರದ ಜವಾರ್ ಕಾಲೋನಿಯಲ್ಲಿರುವ ಅವರ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.
ಚಿತ್ರದುರ್ಗದಲ್ಲೂ ಸಹ ಅಧಿಕಾರಿಗಳ ಮನೆ ಮೇಲೆ ಲೋಕಾಯು ಪೊಲೀಸರು ದಾಳಿ ನಡೆಸಿದ್ದು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಕೂಡ ಬಿಬಿಎಂಪಿ ಎಇಇ ಮಾಧವ ರಾವ್ ಮನೆ ಮೇಲೆ ದಾಳಿ ನಡೆದಿದೆ. ಎಂಜಿನಿಯರಿಂಗ್ ವಿಭಾಗದ ಎಇಇ ಮಾಧವರಾವ್ ಮನೆಗೆ ತಲುಪಿರುವ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


