Monday, June 8, 2026
spot_img
More
    spot_img
    HomeLatest newsಚುನಾವಣೆಗೂ ಮುನ್ನವೇ ಕೇಜ್ರಿವಾಲ್‌ಗೆ ಆಘಾತ: AAP ತೊರೆದ ಎಂಟು ಮಂದಿ ಶಾಸಕರು

    ಚುನಾವಣೆಗೂ ಮುನ್ನವೇ ಕೇಜ್ರಿವಾಲ್‌ಗೆ ಆಘಾತ: AAP ತೊರೆದ ಎಂಟು ಮಂದಿ ಶಾಸಕರು

    ನವದೆಹಲಿ: ದೆಹಲಿ ಚುನಾವಣೆಗೆ ಕೇವಲ ಐದು ದಿನಗಳು ಬಾಕಿಯಿರುವಾಗಲೇ ಅರವಿಂದ್‌ ಕೇಜ್ರಿವಾಲ್‌ಗೆ ಬಿಗ್‌ ಶಾಕ್‌ ಎದುರಾಗಿದೆ.

    Advertisement

    ಟಿಕೆಟ್‌ ಸಿಗದೇ ಪಕ್ಷದ ವಿರುದ್ಧ ಮುನಿಸಿಕೊಂಡಿದ್ದ 8 ಮಂದಿ ಶಾಸಕರು ಎಎಪಿ ಪಕ್ಷಕ್ಕೆ ಗುಡ್‌ಬೈ ಹೇಳಿದ್ದಾರೆ.

    ಈ ಮೂಲಕ ಮತ್ತೆ ಸಿಎಂ ಕನಸು ಕಾಣುತ್ತಿದ್ದ ಅರವಿಂದ್‌ ಕೇಜ್ರಿವಾಲ್‌ಗೆ ಬಿಗ್‌ ಶಾಕ್‌ ಎದುರಾಗಿದೆ.

    ರಾಜೀನಾಮೆ ನೀಡಿದ ಶಾಸಕರು ಪೈಕಿ ನರೇಶ್‌ ಯಾದವ್‌, ರೋಹಿತ್‌ ಕುಮಾರ್‌, ರಾಜೇಶ್‌ ರಿಷಿ, ಮದನ್‌ ಲಾಲ್‌, ಪವನ್‌ ಶರ್ಮಾ, ಭಾವನಾ ಗೌಡ್‌, ಬಿ.ಎಸ್.ಜೂನ್‌ ಮತ್ತು ಗಿರೀಶ್‌ ಸೋನಿ ಸೇರಿದ್ದಾರೆ.

    ಈ ಬಗ್ಗೆ ಎಲ್ಲಾ ಶಾಸಕರು ಟ್ವೀಟ್‌ ಮಾಡಿದ್ದು, ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಮ್ಮ ನಂಬಿಕೆಯನ್ನು ಕಳೆದುಕೊಂಡಿದ್ದೇನೆ ಎಂದು ಹೇಳಿರುವ ಶಾಸಕರು, ಜೈಲಿಗೆ ಹೋಗಿ ಬಂದವರು ಟಿಕೆಟ್‌ ಪಡೆದಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

    ಇನ್ನು ಎಲ್ಲಾ ಶಾಸಕರು ಕೂಡ ಅರವಿಂದ್‌ ಕೇಜ್ರಿವಾಲ್‌ ಅವರ ನಿರ್ಧಾರದ ವಿರುದ್ಧ ಕಿಡಿಕಾರಿದ್ದು, ಎಎಪಿ ಭ್ರಷ್ಟಾಚಾರ-ಮುಕ್ತ ಆಡಳಿತ ಮತ್ತು ಪಾರದರ್ಶಕತೆಯ ತತ್ವಗಳಿಗೆ ದ್ರೋಹ ಬಗೆದಿದೆ. ಪಕ್ಷವು ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಕೊಳಚೆ ಗುಂಡಿಯಾಗಿದೆ ಎಂದು ಟೀಕೆ ಮಾಡಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಕಾಕ್ರೋಚ್ ಜನತಾ ಪಾರ್ಟಿ: ಸಾಮಾಜಿಕ ಜಾಲತಾಣದಲ್ಲಿ ಬಿರುಗಾಳಿ ಎಬ್ಬಿಸಿದ ವೈರಲ್ ಟ್ರೆಂಡ್!

    ಕಾಕ್ರೋಚ್ ಜನತಾ ಪಾರ್ಟಿ ಎಂಬ ಪದ ಸಾಮಾಜಿಕ ಜಾಲತಾಣದಲ್ಲಿ ಯಾವಾಗ, ಹೇಗೆ ವೈರಲ್ ಆಯಿತು? ಈ ಟ್ರೆಂಡ್ ಹಿಂದಿನ ಸಂಪೂರ್ಣ ಕಥೆ ಓದಿ.

    ಬೆಂಗಳೂರಿನಲ್ಲಿ ಮುಂಗಾರು ಆರ್ಭಟ: ಆಲಿಕಲ್ಲು ಮಳೆ, ಗುಡುಗು-ಸಿಡಿಲಿಗೆ ನಗರ ತತ್ತರ

    ಬೆಂಗಳೂರು: ಸಂಜೆ ಐಟಿ ರಾಜಧಾನಿ ಬೆಂಗಳೂರಿನ ಮೇಲೆ ಪ್ರಕೃತಿ ತನ್ನ ಕೋಪವನ್ನು ಸಂಪೂರ್ಣವಾಗಿ ತೋರಿಸಿತು. ಕಾರ್ಮೋಡ ಕವಿದ ಆಕಾಶದಿಂದ ಮೊದಲು ಗುಡುಗು-ಸಿಡಿಲಿನ ಆರ್ಭಟ, ಬಳಿಕ ಆಲಿಕಲ್ಲು ಮಳೆ ಮತ್ತು ಜೋರು ಗಾಳಿ ನಗರವನ್ನು...

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading