ನವದೆಹಲಿ: ಇಂದಿನಿಂದ (ಜನವರಿ 31) ಬಜೆಟ್ ಅಧಿವೇಶನ ಆರಂಭವಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಉಭಯ ಸದನಗಳನ್ನು ಉದ್ದೇಶಿಸಿ ಮಾತನ್ನಾಡಿದರು. ಈ ಕುರಿತು ಸಂಸತ್ ಆವರಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸೋನಿಯಾ ಗಾಂಧಿ ‘poor lady’ (ಬಡ ಮಹಿಳೆ) ಎಂಬ ಪದ ಬಳಕೆ ಮಾಡಿದ್ದಾರೆ.
ಸದ್ಯ ಸೋನಿಯಾ ಗಾಂಧಿ ನೀಡಿರುವ ಈ ಹೇಳಿಕೆ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಸೋನಿಯಾ ಗಾಂಧಿ ವಿರುದ್ಧ ಕಿಡಿಕಾರುತ್ತಿದ್ದಾರೆ. ಹೌದು, ಸೋನಿಯಾ ಗಾಂಧಿ ʼPoor Lady, ಭಾಷಣ ಮುಗಿಸುವ ಹೊತ್ತಿಗೆ ರಾಷ್ಟ್ರಪತಿಗಳು ಸುಸ್ತಾಗಿ ಹೋದರು. ಅವರಿಗೆ ಮಾತನಾಡಲು ಕಷ್ಟವಾಗುತ್ತಿತ್ತು. ಬೇಸರದ ವಿಷಯʼ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


