ನವದೆಹಲಿ: ಇಲ್ಲಿನ ಅರುಣ್ ಜೇಟ್ಲಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ದೆಹಲಿ ಹಾಗೂ ರೈಲ್ವೇಸ್ ತಂಡಗಳ ನಡುವಿನ ಪಂದ್ಯದ ಮೂಲಕ 13 ವರ್ಷಗಳ ಬಳಿಕ ಡೊಮೆಸ್ಟಿಕ್ ಕ್ರಿಕೆಟ್‌ಗೆ ಮರಳಿರುವ ವಿರಾಟ್ ಕೊಹ್ಲಿ ಮೊದಲ ಇನ್ನಿಂಗ್ಸ್‌ನಲ್ಲೇ ಒಂದಂಕಿಗೆ ಕ್ಲೀನ್ ಬೌಲ್ಡ್ ಆಗುವ ಮೂಲಕ ನಿರಾಸೆ ಮೂಡಿಸಿದ್ದಾರೆ.
ಹೌದು, ತಂಡದ ಪರ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ 15 ಎಸೆತಗಳನ್ನು ಎದುರಿಸಿ 1 ಬೌಂಡರಿ ಸಹಿತ 6 ರನ್ ಕಲೆಹಾಕಿ ಹಿಮಾನ್ಶು ಸಾಂಗ್ವಾನ್ ಎಸೆತದಲ್ಲಿ ಬೌಲ್ಡ್ ಆದರು. ಇನ್ನು ವಿರಾಟ್ ಕೊಹ್ಲಿ ದಶಕದ ಬಳಿಕ ದೆಹಲಿ ಜೆರ್ಸಿ ತೊಟ್ಟು ಕಣಕ್ಕಿಳಿದಿದ್ದ ಕಾರಣ ಪಂದ್ಯ ವೀಕ್ಷಿಸಲು ಸಾವಿರಾರು ಕೊಹ್ಲಿ ಅಭಿಮಾನಿಗಳು ನೆರೆದಿದ್ದರು. ಆದರೆ ಕೊಹ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದು, ಅಭಿಮಾನಿಗಳು ಬೇಸರಗೊಂಡಿದ್ದಾರೆ.
ಇನ್ನು ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರೈಲ್ವೇಸ್ 67.4 ಓವರ್‌ಗಳಲ್ಲಿ 241 ರನ್‌ಗಳಿಗೆ ಆಲ್‌ಔಟ್ ಆಗಿತ್ತು. ಇತ್ತ ದೆಹಲಿ ಎರಡನೇ ದಿನದ ಊಟದ ವಿರಾಮದ ವೇಳೆಗೆ 42 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 168 ರನ್ ಕಲೆಹಾಕಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


