ಮುಂಬೈ: ಪ್ರಸ್ತುತ ನಡೆಯುತ್ತಿರುವ 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ 12ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 8 ವಿಕೆಟ್ ಗೆಲುವನ್ನು ದಾಖಲಿಸುವ ಮೂಲಕ ಟೂರ್ನಿಯಲ್ಲಿ ಮೊದಲ ಜಯ ಕಂಡಿದೆ.
ಈ ಮೂಲಕ ಸತತ ಎರಡು ಪಂದ್ಯಗಳಲ್ಲಿ ಸೋತಿದ್ದ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ ಗೆಲುವಿನ ಖಾತೆ ತೆರೆದಿದ್ದು ಅಂಕಪಟ್ಟಿಯಲ್ಲಿ ಕೊನೆ ಸ್ಥಾನದಿಂದ ಆರನೇ ಸ್ಥಾನಕ್ಕೆ ಏರಿದೆ.
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ 16.2 ಓವರ್ಗಳಲ್ಲಿ 116 ರನ್ ಗಳಿಸಿ ಆಲ್ ಔಟ್ ಆಗಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಗೆಲ್ಲಲು 117 ರನ್ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಸುಲಭವಾಗಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ 12.5 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 121 ರನ್ ಗಳಿಸಿತು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


