ಬೆಂಗಳೂರು: ರಾಜ್ಯಾದ್ಯಂತ ಏಪ್ರಿಲ್ 2ರಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ರಾಜ್ಯದ ಹಲವು ಕಡೆಗಳಲ್ಲಿ ಕಳೆದ ಒಂದು ವಾರದಿಂದ ಅಲ್ಲಲ್ಲಿ ಮಳೆಯಾಗುತ್ತಿದೆ. ವಿಜಯನಗರ, ಶಿವಮೊಗ್ಗ, ತುಮಕೂರು, ಮಂಡ್ಯ, ಕೋಲಾರ,ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್?ನಲ್ಲಿ ಸಾಧಾರಣ ಮಳೆಯಾಗಲಿದೆಕಲಬುರಗಿಯಲ್ಲಿ 41 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ 17.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಭಾಗಮಂಡಲದಲ್ಲಿ ಮಳೆಯಾಗಿದೆ.ಬೆಂಗಳೂರಿನ ಎಚ್‍ಎಎಲ್‍ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


