ಚಿಕ್ಕಮಗಳೂರು ಜಿಲ್ಲೆ ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯ ಹಕ್ಕಿಮಕ್ಕಿ ಗ್ರಾಮದಲ್ಲಿ, ಮದ್ಯಕ್ಕಾಗಿ ಹಣ ನೀಡದ ಕಾರಣ ತನ್ನ ತಾಯಿಯನ್ನು ಕೊಲೆ ಮಾಡಿದ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ.ಆರೋಪಿ ಪವನ್ (25), ತನ್ನ ತಾಯಿ ಭವಾನಿ (55) ಅವರನ್ನು ಕೊಡಲಿಯಿಂದ ಕೊಚ್ಚಿ ಹತ್ಯೆ ಮಾಡಿದ್ದಾನೆ. ಹತ್ಯೆಯ ಬಳಿಕ ಭವಾನಿಯ(52) ಶವವನ್ನು ಬೆಂಕಿ ಹಚ್ಚಲು ಪ್ರಯತ್ನಿಸಿ, ಶವದ ಪಕ್ಕದಲ್ಲೇ ಮಲಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಪವನ್ ಮೊದಲು ಬೆಂಗಳೂರು ಬಾರ್‌ನಲ್ಲಿ ಕೆಲಸ ಮಾಡುತ್ತಿದ್ದನು. ಕೆಲಸ ತ್ಯಜಿಸಿ ಎರಡು ತಿಂಗಳ ಹಿಂದೆ ಊರಿಗೆ ಮರಳಿದ್ದ. ಮದ್ಯ ಸೇವನೆಗೆ ಹಣ ಕೇಳಿದಾಗ ತಾಯಿ ಹಣ ನೀಡಲು ನಿರಾಕರಿಸಿದ್ದರಿಂದ, ಪವನ್ ಹತ್ಯೆಗೆ ಯತ್ನಿಸಿದ ಎನ್ನಲಾಗಿದೆ.ಹಕ್ಕಿ ಮಕ್ಕಿ ಗ್ರಾಮಕ್ಕೆ ಯಾವುದೇ ರಸ್ತೆ ಸಂಪರ್ಕ ಇಲ್ಲ ಅರೆನೂರು ಗ್ರಾಮದಿಂದ ಒಂದುವರೆ ಕಿಲೋಮೀಟರ್ ದೂರದಲ್ಲಿರುವ ಹಕ್ಕಿಮಕ್ಕಿ. ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.ಆಲ್ದೂರು ಪಿಎಸ್‌ಐ ಹಾಗೂ ಇನ್ಸ್‌ಪೆಕ್ಟರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಪವನ್‌ನನ್ನು ಬಂಧಿಸಿದ್ದಾರೆ.
ಬನ್ನೇರುಘಟ್ಟ ಉದ್ಯಾನವನ ಟಿಕೆಟ್ ದರ ಪರಿಷ್ಕರಣೆ: ಟಿಕೆಟ್ ದರಗಳು ಆಗಸ್ಟ್ 1ರಿಂದ ಏರಿಕೆ
ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


