ಬೆಂಗಳೂರು: ಎಲ್ಲೆಂದರಲ್ಲಿ ರಸ್ತೆ ಬದಿ ವಾಹನಗಳನ್ನು ನಿಲ್ಲಿಸುವವರಿಗೆ ಸಂಚಾರಿ ಪೊಲೀಸರು ಮತ್ತೆ ಶಾಕ್ ನೀಡಲಿದ್ದು, ರಾಜ್ಯದಲ್ಲಿ ವಾಹನಗಳ ಟೋಯಿಂಗ್ ಆರಂಭವಾಗಲಿದೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರು, ರಾಜ್ಯದಲ್ಲಿ ಟೋಯಿಂಗ್ ಆರಂಭಿಸುವುದಾಗಿ ಸರ್ಕಾರ ಈಗಾಗಲೇ ಸುಳಿವು ನೀಡಿತ್ತು. ಈ ಹಿನ್ನೆಲೆಯಲ್ಲಿ ಆಗಸ್ಟ್ ಅಂತ್ಯಕ್ಕೆ ರಾಜ್ಯದಲ್ಲಿ ಮತ್ತೆ ಟೋಯಿಂಗ್ ಆರಂಭವಾಗಲಿದೆ ಎಂದು ತಿಳಿಸಿದರು.
ಈ ಬಾರಿ ಗುತ್ತಿಗೆ ನೀಡಲ್ಲ. ಇಲಾಖೆಯಿಂದಲೇ ಟೋಯಿಂಗ್ ನಡೆಯಲಿದೆ. ಪಾರ್ಕಿಂಗ್ ಸಮಸ್ಯೆ ತುಂಬಾ ತಲೆನೋವಾಗಿದೆ. ರಸ್ತೆಗಳಲಲಿ ನಿಲ್ಲಿಸುವ ವಾಹನಗಳ ಟೋಯಿಂಗ್ ಮಾಡಲಾಗುತ್ತದೆ. ಪೊಲೀಸರಿಗೆ ಜನರೊಂದಿಗೆ ಮಾನವೀಯತೆಯಿಂದ ವರ್ತಿಸಲು, ಶಾಂತಿಯಿಂದ ವರ್ತಿಸಲು ಸೂಚಿಸಲಾಗಿದೆ. ಜಟಾಪಟಿ ನಡೆದರೆ ಕಾನೂನು ಇದೆ ಎಂದು ಎಚ್ಚರಿಕೆ ನೀಡಿದರು.
ರಸ್ತೆಗಳನ್ನು ಮಾಡುವುದು ಯಾತಕ್ಕೆ? ಜನರು ಓಡಾಡಲಿ ಎಂದು. ಆದರೆ ರಸ್ತೆಗಳಲ್ಲಿಯೇ ವಾಹನಗಳನ್ನು ಪಾರ್ಕಿಂಗ್ ಮಾಡುತ್ತಿರುವುದರಿಂದ ಸಂಚಾರ ದಟ್ಟಣೆ ಮತ್ತಷ್ಟು ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಸುಗಮ ಸಂಚಾರಕ್ಕಾಗಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಬಹುತೇಕ ಕಡೆಗಳಲ್ಲಿ ಮುಖ್ಯರಸ್ತೆಗಳಲ್ಲಿಯೇ ವಾಹನಗಳನ್ನು ನಿಲ್ಲಿಸಲಾಗುತ್ತಿದೆ. ಇದರಿಂದ ಜನರ ಓಡಾಟಕ್ಕೆ ಸಮಸ್ಯೆಯಾಗುತ್ತಿದೆ. ಇದನ್ನು ತಪ್ಪಿಸಲು ಟೋಯಿಂಗ್ ಕ್ರಮ ಮತ್ತೆ ಜಾರಿಯಾಗುತ್ತಿದೆ ಎಂದು ಹೇಳಿದರು.
ಪರಮೇಶ್ವರ್ ಸಭೆ ನಡೆಸಿದ್ರೆ ಆಕಾಶ ಕೆಳಗೆ ಬೀಳುತ್ತಾ?: ಸಚಿವ ಸತೀಶ್ ಜಾರಕಿಹೊಳಿ ಪ್ರಶ್ನೆ
ಎಐ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


