ಹೊಸದಿಲ್ಲಿ: ಯುಪಿಐ ಪೇಮೆಂಟ್ ನಲ್ಲಿ ಆ.1ರಿಂದ ಕೆಲ ಪ್ರಮುಖ ಬದಲಾವಣೆಗಳಾಗಲಿವೆ. ಯುನಿ ಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ ನಿಯಮಗಳಲ್ಲಿ ಮಹತ್ವದ ಬದಲಾ ವಣೆಗಳನ್ನು ಜಾರಿಗೆ ತರಲು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊ ರೇಷನ್ ಆಫ್ ಇಂಡಿಯಾ ಮುಂದಾಗಿದೆ.
ಈ ಹೊಸ ಮಾರ್ಗಸೂಚಿಗಳು ಗೂಗಲ್ ಪೇ, ಫೋನ್ ಪೇ ಮತ್ತು ಪೇಟಿಎಂನಂತಹ ಪಾವತಿ ಆಪ್‌ಗಳಿಗೆ ಅನ್ವಯವಾಗ ಲಿವೆ. ಈ ಬದಲಾವಣೆಗಳು ಬಳಕೆ ದಾರರ ದೈನಂದಿನ ವಹಿವಾಟುಗಳ ಮೇಲೆ ಅಂತಹ ಬದಲಾವಣೆಗಳನ್ನೇನೂ ತರುವುದಿಲ್ಲವಾದರೂ, ಬ್ಯಾಲೆನ್ಸ್ ಚೆಕ್ ಮತ್ತು ಆಟೋ ಡೆಬಿಟ್‌ಗಳಂತಹ ಕೆಲವು ಕಾರ್ಯಗಳಿಗೆ ಮಿತಿಗಳನ್ನು ಹೇರ ಲಿದೆ. ಹೊಸ ನಿಯಮಗಳ ಪ್ರಕಾರ, ಬಳಕೆದಾರರು ಪ್ರತಿ ಯುಪಿಐ ಅಪ್ಲಿಕೇಶನ್‌ನಲ್ಲಿ ದಿನಕ್ಕೆ ಗರಿಷ್ಟ 50 ಬಾರಿ ಮಾತ್ರ ಬ್ಯಾಲೆನ್ಸ್ ಚೆಕ್ ಮಾಡಲು ಅವಕಾಶ ಇರಲಿದೆ.
ಇನ್ನೂ ಬ್ಯಾಲೆನ್ಸ್ ಮಾಡುವುದರ ಜೊತೆಗೆ ಓಟಿಟಿ ಸೇರಿದಂತೆ ಮೊಬೈಲ್ ರಿಚಾರ್ಜ್ ಗಳ ಆಟೋ ಪೇಗೆ ಸಮಯ ನಿಗದಿ ಯಾಗಿದ್ದು, ಆ ಸಮಯ ಸಂದರ್ಭ ದಲ್ಲಿ ಮಾತ್ರ ಪಾವತಿಗೆ ಅವಕಾಶ ಇರಲಿದೆ.
ಮೂರು ನಿರ್ದಿಷ್ಟ ಸಮಯದ ಸ್ಲಾಟ್‌ಗಳನ್ನು ನಿಗದಿಪಡಿಸಲಾಗಿದೆ. ಪೀಕ್ ಅವರ್‌ಗಳಲ್ಲಿ ಸರ್ವ‌್ರಗಳ ಮೇಲಿನ ಒತ್ತಡ ಕಡಿಮೆ ಮಾಡಲು ಈ ಪಾವತಿಗಳನ್ನು ಬೆಳಿಗ್ಗೆ 10 ಗಂಟೆಗೂ ಮುನ್ನ, ಮಧ್ಯಾಹ್ನ 1 ರಿಂದ ಸಂಜೆ 5 ಗಂಟೆಯ ನಡುವೆ, ಮತ್ತು ರಾತ್ರಿ 9.30ರ ನಂತರ ಮಾತ್ರ ಆಟೋ ಪೇ ಪ್ರಕ್ರಿಯೆ ನಡೆಯಲಿದೆ.
ಆಯಿಲ್ ಇಂಡಿಯಾ ಲಿಮಿಟೆಡ್‌ನಲ್ಲಿ 262 ಹುದ್ದೆಗಳ ನೇಮಕಾತಿ ಆರಂಭ
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


