ಧರ್ಮಸ್ಥಳ: ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ದೂರುದಾರ ಗುರುತಿಸಿದ್ದ 6ನೇ ಪಾಯಿಂಟ್‌ನಲ್ಲಿ ಎರಡು ಮೂಳೆಗಳು ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ದೂರುದಾರ ಗುರುತಿಸಿದ ಸ್ಥಳಗಳ ಪೈಕಿ ಇದೀಗ ಆರನೇ ಪಾಯಿಂಟ್‌ನಲ್ಲಿ 15 ಕಾರ್ಮಿಕರಿಂದ ಉತ್ಖನನ ನಡೆಯುತ್ತಿದ್ದು, ಎರಡು ಅಸ್ಥಿಪಂಜರ ಪತ್ತೆಯಾಗಿದೆ.
ಆದರೆ ದೇಹದ ಪೂರ್ತಿ ಭಾಗಗಳು ಸಿಕ್ಕಿಲ್ಲ. ಕೆಲವು ಭಾಗಗಳು ಮಾತ್ರ ಸಿಕ್ಕಿದ್ದು, ಇನ್ನೂ ಆಳಕ್ಕೆ ಅಗೆದು ಹುಡುಕಾಟ ನಡೆಸಲಾಗುತ್ತಿದೆ. ಈ ವೇಳೆ ಮೂಳೆಗಳು ದೊರೆತ ಆರನೇ ಪಾಯಿಂಟ್ ಸುತ್ತ ಹಸಿರು ಪರದೆಯನ್ನು ಹಾಕಿ ಗೌಪ್ಯತೆಯೊಂದಿಗೆ ತನಿಖೆ ಮುಂದುವರಿಸಿದ್ದು, ಇನ್ನಷ್ಟು ಮೂಳೆಗಳು ದೊರಕಲಿವೆಯಾ ಎಂಬ ಪ್ರಶ್ನೆ ಕುತೂಹಲ ಕೆರಳಿಸಿದೆ.
ಇನ್ನು ಉತ್ಖನನ ನಡೆಸುವ ಸ್ಥಳದಲ್ಲಿ ನೇತ್ರಾವತಿ ನದಿ ನೀರಿನ ಹರಿವು ಇದ್ದ ಕಾರಣ ಗುಂಡಿಯಲ್ಲಿ ನೀರು ತುಂಬಿದೆ. ನೀರನ್ನು ಹೊರ ತೆಗೆದು ಅಧಿಕಾರಿಗಳು ಮುಂದಿನ ಕ್ರಮ ಕೈಗೊಂಡಿದ್ದಾರೆ. ಇದನ್ನು ಸಂಪೂರ್ಣವಾಗಿ ಅಗೆದ ಬಳಿಕ 7 ಹಾಗೂ 8ನೇ ಪಾಯಿಂಟ್‌ನಲ್ಲಿ ಉತ್ಖನನ ಕಾರ್ಯ ನಡೆಯುವ ಸಾಧ್ಯತೆಯಿದೆ.
ಇನ್ನು ಆರನೇ ಪಾಯಿಂಟ್‌ನಲ್ಲಿ ಸಿಕ್ಕಿರುವ ಅಸ್ತಿಪಂಜರಗಳನ್ನು ಎಸ್‌ಐಟಿ ಅಧಿಕಾರಿಗಳು ಎಫ್‌ಎಸ್‌ಎಲ್‌ಗೆ ಕಳುಹಿಸಲು ಮುಂದಾಗಿದ್ದು, ಈ ಪ್ರಕರಣ ಇಂದಿನಿಂದ ರೋಷಕ ತಿರುವು ಪಡೆದುಕೊಳ್ಳಲಿದೆ.
ಕಾಂತಾರ 1’ ರಿಲೀಸ್‌ಗೂ ಮುನ್ನವೇ ಹೊಸ ಪ್ಯಾನ್ ಇಂಡಿಯಾ ಚಿತ್ರಕ್ಕೆ ಸಹಿ ಹಾಕಿದ ರಿಷಬ್ ಶೆಟ್ಟಿ
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


