ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಬಯಸುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ ‘ಬ್ಯಾಂಕ್ ಆಫ್ ಇಂಡಿಯಾ’ (BOI) ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಒಟ್ಟು 400 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಡಿಸೆಂಬರ್ 25 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.
ನೇಮಕಾತಿ ವಿವರಗಳು:
ಒಟ್ಟು ಹುದ್ದೆಗಳು: 400 ಅಪ್ರೆಂಟಿಸ್ ಹುದ್ದೆಗಳು.
ಅರ್ಜಿ ಸಲ್ಲಿಕೆ ಆರಂಭ: ಡಿಸೆಂಬರ್ 25, 2025.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 10, 2026.
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್ ಮೂಲಕ ಮಾತ್ರ.
ಅಧಿಕೃತ ವೆಬ್‌ಸೈಟ್: bankofindia.co.in
ಕರ್ತವ್ಯ ಸ್ಥಳ :ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ನಿರ್ವಹಿಸಬೇಕು.
ಶೈಕ್ಷಣಿಕ ಅರ್ಹತೆ :ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಾನ :ದಿನಾಂಕ 01/12/2025ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 20 ಹಾಗೂ ಗರಿಷ್ಠ 28 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ :
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ
ಪ.ಜಾತಿ, ಪ.ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ
ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10 ವರ್ಷ
ಆಯ್ಕೆ ವಿಧಾನ :
ಆನ್‌ಲೈನ್ ಪರೀಕ್ಷೆ
ದಾಖಲೆಗಳ ಪರಿಶೀಲನೆ
ಅರ್ಜಿ ಶುಲ್ಕದ ವಿವರ:
ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವರ್ಗವಾರು ಶುಲ್ಕ ನಿಗದಿಪಡಿಸಲಾಗಿದೆ. ಗಮನಿಸಿ, ಈ ಕೆಳಗಿನ ಶುಲ್ಕದ ಜೊತೆಗೆ GST ಕೂಡ ಅನ್ವಯವಾಗುತ್ತದೆ:
ಸಾಮಾನ್ಯ ಮತ್ತು ಇತರ ಅಭ್ಯರ್ಥಿಗಳು: ₹800 + GST
ಪ.ಜಾತಿ, ಪ.ಪಂಗಡ ಹಾಗೂ ಮಹಿಳಾ ಅಭ್ಯರ್ಥಿಗಳು: ₹600 + GST
ಅಂಗವಿಕಲ (PwBD) ಅಭ್ಯರ್ಥಿಗಳು: ₹400 + GST
ಅರ್ಜಿ ಸಲ್ಲಿಸುವುದು ಹೇಗೆ? (Step-by-Step Guide)
ಅರ್ಜಿ ಸಲ್ಲಿಸುವಾಗ ತಪ್ಪುಗಳಾಗದಂತೆ ತಡೆಯಲು ಈ ಕೆಳಗಿನ ಹಂತಗಳನ್ನು ಅನುಸರಿಸಿ:
ಮೊದಲು ಅಧಿಕೃತ ಅಧಿಸೂಚನೆಯನ್ನು ಪೂರ್ಣವಾಗಿ ಓದಿ ನಿಮ್ಮ ಅರ್ಹತೆಯನ್ನು ಖಚಿತಪಡಿಸಿಕೊಳ್ಳಿ.
ನಿಮ್ಮ ಭಾವಚಿತ್ರ, ಸಹಿ, ವಿದ್ಯಾರ್ಹತೆಯ ಪ್ರಮಾಣಪತ್ರಗಳು ಮತ್ತು ಸ್ಕ್ಯಾನ್ ಮಾಡಿದ ದಾಖಲೆಗಳನ್ನು ಮೊದಲೆ ರೆಡಿ ಇಟ್ಟುಕೊಳ್ಳಿ.
ವೆಬ್‌ಸೈಟ್‌ಗೆ ಭೇಟಿ ನೀಡಿ ಬ್ಯಾಂಕಿನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಥವಾ ಡೈರೆಕ್ಟ್ ‘Apply Online’ ಲಿಂಕ್ ಕ್ಲಿಕ್ ಮಾಡಿ.
ಮಾಹಿತಿ ಭರ್ತಿ ಮಾಡಿ: ಅಪ್ಲಿಕೇಶನ್‌ನಲ್ಲಿ ನಿಮ್ಮ ಹೆಸರು, ವಿಳಾಸ, ವಿದ್ಯಾರ್ಹತೆ ಮತ್ತು ಮೊಬೈಲ್ ಸಂಖ್ಯೆಯನ್ನು ನಿಖರವಾಗಿ ನಮೂದಿಸಿ.
ಪರಿಶೀಲನೆ (Preview): ‘Submit’ ಬಟನ್ ಒತ್ತುವ ಮುನ್ನ ನಮೂದಿಸಿದ ಮಾಹಿತಿ ಸರಿಯಿದೆಯೇ ಎಂದು ಮತ್ತೊಮ್ಮೆ ಚೆಕ್ ಮಾಡಿ.
ಕೊನೆಯ ಹಂತದಲ್ಲಿ ನಿಮ್ಮ ವರ್ಗಕ್ಕೆ ಅನ್ವಯವಾಗುವ ಶುಲ್ಕವನ್ನು ಪಾವತಿಸಿ ಅರ್ಜಿಯನ್ನು ಪೂರ್ಣಗೊಳಿಸಿ.
ಪ್ರಮುಖ ದಿನಾಂಕಗಳು:
ಅರ್ಜಿ ಆರಂಭ: ಡಿಸೆಂಬರ್ 25, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜನವರಿ 10, 2026
ಜನವರಿಯಲ್ಲಿ 10 ದಿನ ಬ್ಯಾಂಕ್‌ಗಳಿಗೆ ರಜೆ! ಇಲ್ಲಿದೆ ಆರ್‌ಬಿಐ ರಜಾ ಪಟ್ಟಿ


